ಮಾ.12ರ ವರೆಗೆ ಸದನದಿಂದ ಭದ್ರಾವತಿ ಶಾಸಕ ಸಂಗಮೇಶ್ ಸಸ್ಪೆಂಡ್ / ಒನ್ ನೇಷನ್, ಒನ್ ಎಲೆಕ್ಷನ್​ ಚರ್ಚೆ ವೇಳೆ ಸದನದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಒನ್ ನೇಷನ್, ಒನ್ ಎಲೆಕ್ಷನ್​ ವಿಚಾರಕ್ಕೆ ಕಾಂಗ್ರೆಸ್​ ಶಾಸಕರು ವಿಧಾನಸಭೆ ಕಲಾಪದ ವೇಳೆ ಗಲಾಟೆ, ಗದ್ದಲ ಉಂಟು ಮಾಡಿದರು.ಈ ವೇಳೆ ಅಶಿಸ್ತಿನಿಂದ ನಡೆದುಕೊಂಡ ಭದ್ರಾವತಿ ಶಾಸಕ ಬಿಕೆ ಸಂಗಮೇಶ್​ ಅವರನ್ನು ಮಾ.12ರ ವರೆಗೆ ಅಮಾನತು ಮಾಡಿ ನಿರ್ಣಯ ಕೈಗೊಳ್ಳಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒನ್ ನೇಷನ್, ಒನ್ ಎಲೆಕ್ಷನ್​ ವಿಚಾರದ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಕಾಂಗ್ರೆಸ್​ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದಾಗ ಶಾಸಕ ಸಂಗಮೇಶ್​​, ಶರ್ಟ್​ ಬಿಚ್ಚಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಸ್ಪೀಕರ್ ಕಾಗೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಾಲಪವನ್ನು 15 ನಿಮಿಷಗಳ ಕಾಲ ಮುಂದೂಡಿದರು.

ಕಲಾಪ ಪುನಃ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಶಾಸಕರು ಒನ್ ನೇಷನ್, ಒನ್ ಎಲೆಕ್ಷನ್​ ವಿಚಾರದ ಚರ್ಚೆ ಬೇಡವೆಂದು ಘೋಷಣೆಯ ನಡುವೆಯೇ, ಸಭಾಪತಿ ಸದನದಲ್ಲಿ ಅಗೌರವ, ಅಶಿಸ್ತಿನಿಂದ ನಡೆದರೆ ನಾನು ಸಹಿಸಲ್ಲ ಎಂದು ಸಂಗಮೇಶ್ ಹೆಸರಿಸಿ,ಉಳಿದ ಸದಸ್ಯರಿಗೆ ಎಚ್ಚರಿಕೆಯನ್ನು ನೀಡಿದರು. ನಂತರ ಅಶಿಸ್ತಿನ ಕುರಿತು ಸಂಗಮೇಶ್ ಕಲಾಪಕ್ಕೆ ಬರದಂತೆ ತಡೆಯುವ ಪ್ರಸ್ತಾವವನ್ನ ಸಚಿವ ಬೊಮ್ಮಾಯಿ ಮಂಡಿಸಿದರು.

ನಂತರ ತಕ್ಷಣದಿಂದ ಜಾರಿಗೆ ಬತುವಂತೆ ಮಾರ್ಚ್​ 12ರವರೆಗೆ ಸಂಗಮೇಶ್ ಸದನದಿಂದ ಹೊರಕ್ಕೆ ಹಾಕುವ ನಿರ್ಣಯವನ್ನ ಕೈಗೊಳ್ಳಲಾಯಿತು. 

ಆ ಮೂಲಕ 9 ದಿನಗಳ ಕಾಲ ಸಂಗಮೇಶ್​​ರನ್ನ ಸದನದಿಂದ ಅಮಾನತು ಮಾಡುವ ನಿರ್ಧಾರವನ್ನ ಸ್ಪೀಕರ್ ಕಾಗೇರಿ ಕೈಗೊಂಡು, ಸದನವನ್ನು ಮಧ್ಯಾಹ್ನ 3ಗಂಟೆಯ ವರೆಗೆ ಮತ್ತೆ ಮುಂದೂಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ತಮ್ಮ ಸರ್ಕಾರವನ್ನು ಕೆಳಗಿಳಿಸಿ, ಅನ್ಯ ಪಕ್ಷದ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ, ಸದಾ ಅವರನ್ನು ಕೆಳಗಿಳಿಸಲು ಸುಳ್ಳು ಪ್ರಚಾರ ಮಾಡುತ್ತಾ, ಸಾಂವಿಧಾನಿಕ ಬಿಕ್ಕಟ ಸೃಷ್ಟಿಸಲು ಕಾಯುವ ಪಕ್ಷಗಳ ನಡುವೆ ಎಂಕೆ ಸ್ಟಾಲಿನ್ (MK Stalin)

[ccc_my_favorite_select_button post_id="121840"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]