
ಬೆಂಗಳೂರು: ನಗರದ ಡಿ.ಎ.ಆರ್ ಖಾವಾಯತ್ತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್ ಪೂಲೀಸ್ ವಾಹನಗಳ ತಪಾಸಣೆ ನಡೆಸಿದರು.

ಸಾರ್ವಜನಿಕರ ವಾಹನಗಳ ತಪಾಸಣೆ ನಡೆಸುವ ಪೊಲೀಸರು ತಮ್ಮ ವಾಹನಗಳನ್ನು ಸಮರ್ಪಕ ದಾಖಲೆ ಹಾಗೂ ಬಳಕೆಗೆ ಯೋಗ್ಯವಾಗಿಟ್ಟು ಕೊಳ್ಳಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಇದೇ ವೇಳೆ ಪೊಲೀಸರು ಜಿಲ್ಲಾ ಕವಾಯತ್ತಿನಲ್ಲಿ ಭಾಗವಹಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ವೇಳೆ ಅಪರ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಗಣೇಶ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

