
ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಗರದ ಶಾಂತಿನಗರದ ಶ್ರೀ ಮುತ್ಯಾಲಮ್ಮ ದೇವಾಲಯದಲ್ಲಿ ನಡೆಯಿತು .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‍ನ ಜಿಲ್ಲಾ ಯೋಜನಾ ನಿರ್ದೇಶಕ ಸತೀಶ್ ನಾಯಕ್ ಮಾತನಾಡಿ, ಧಾರ್ಮಿಕ ಹಾಗೂ ಸಾಮಾಜಿಕ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವ ಅಗತ್ಯವಿದೆ. ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆಗೆ ಸಂಸ್ಥೆ ಶ್ರಮಿಸುತ್ತಿದೆ ಎಂದರು.
ನಾಗರತ್ನ ರಾಜನ್ ದಂಪತಿಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಾಣಿಜ್ಯೋದ್ಯಮಿ ಹೇಮರಾಜ್,ದೇವನಹಳ್ಳಿಯ ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕರಾದ ನಿಶಾ.ಎ.ಟಿ, ಭಾರತೀಯ ಜೀವ ವಿಮಾ ನಿಗಮ ದೊಡ್ಡಬಳ್ಳಾಪುರ ಶಾಖಾ ವ್ಯವಸ್ಥಾಪಕ ಎ.ಪಿ.ರವೀಂದ್ರ ಮೊದಲಾದವರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

