ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಡೆಗಣನೆ / ನವ ಬೆಂಗಳೂರಿಗಾಗಿ ಹೋರಾಟ ಅನಿವಾರ್ಯ: ಸತ್ಯಪ್ರಕಾಶ್

ಬೆಂಗಳೂರು: ನಗರಕ್ಕೆ ಪರ್ಯಯವಾಗಿ ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು “ನವ ಬೆಂಗಳೂರು” ಎಂದು ಘೋಷಿಸಿ, ಬಜೆಟ್‌ನಲ್ಲಿ  ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು  ಉಸ್ತುವಾರಿ ಸಚಿವ ಆರ್.ಅಶೋಕ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ ಸಹ ಅವರ ಇಚ್ಛಾಶಕ್ತಿ ಕೊರತೆಯಿಂದ ಪ್ರಸ್ತುತ ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ನವ ಬೆಂಗಳೂರು ಹೋರಾಟ ಸಮಿತಿಯ ಮುಖಂಡ ಸತ್ಯಪ್ರಕಾಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಬಜೆಟ್ – 2021ರ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಬೆಂ.ಗ್ರಾ.ಜಿಲ್ಲೆಗೆ ಸಂಬಂಧಿಸಿದಂತೆ ಹಿಂದಿನ ಬಜೆಟ್‌ಗಳಲ್ಲಿನ ಘೋಷಣೆಗಳೇ ಇನ್ನೂ ಅನುದಾನ ಬಿಡುಗಡೆಯಾಗದೆ ನೆನೆಗುದಿಗೆ ಬಿದ್ಸಿವೆ. ಅದೇ ರೀತಿ ಈ ಬಾರಿ ಕೂಡ ನಮ್ಮ ಜಿಲ್ಲೆಗೆ ಅನ್ಯಾಯವಾಗಿದೆ. ಅದರಲ್ಲೂ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಅನ್ಯಾಯದ ಇತಿಹಾಸ ಮರುಕಳಿಸಿದೆ.

ಬೆಂಗಳೂರು ನಗರಕ್ಕೆ ಪರ್ಯಾಯ ನಗರದ ಅನಿವಾರ್ಯತೆಯ ಗಂಭೀರತೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವರಿಗೆ ಹಾಗೂ ಜಿಲ್ಲೆಯ ಶಾಸಕರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ ಸಹ ಕಂದಾಯ ಸಚಿವರು ಹಾಗೂ ಜಿಲ್ಲೆಯ ಶಾಸಕರು ಕನಿಷ್ಠ ಪ್ರಯತ್ನವಾಗಿ ಪ್ರಾಥಮಿಕ ಹಂತದಲ್ಲಿಯೇ ಸರ್ಕಾರದ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ” ನವ ಬೆಂಗಳೂರು ” ಪರಿಕಲ್ಪನೆಯ ಸಾಕಾರತೆ ರಾಜ್ಯದ ಆರ್ಥಿಕ ಉನ್ನತಿಗೆ ಎಷ್ಟು ಅನಿವಾರ್ಯ ಅಂತ ಸರ್ಕಾರಕ್ಕೆ ಅರಿವಾಗುತ್ತದೆ.

“ನವ ಬೆಂಗಳೂರು” ಸಾಕಾರ ಮಾಡಿಯೇ ತೀರುತ್ತೇವೆ. ಇದಕ್ಕಾಗಿ ನಾವು ಎಂತಹ ತ್ಯಾಗಕ್ಕಾದರೂ ಸಿದ್ಧರಿದ್ದೇವೆ. ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ “ನವ ಬೆಂಗಳೂರು ಹೋರಾಟ ಸಮಿತಿ”ಯ ಪರಮ ಗುರಿ. ಅದರ ಸಲುವಾಗಿಯೇ ಈ ಹೋರಾಟ. ” ನವ ಬೆಂಗಳೂರು ” ಪರಿಕಲ್ಪನೆಯ ಸಾಕಾರಕ್ಕಾಗಿ ಇನ್ನು ಮುಂದೆ ಹೋರಾಟದ ದಾರಿ ಅನಿವಾರ್ಯವಾಗಿದೆ. ಸರ್ಕಾರ ನಮ್ಮ ಜಿಲ್ಲೆಯನ್ನು “ನವ ಬೆಂಗಳೂರು” ಎಂದು ಘೋಷಿಸಿ ಅಭಿವೃದ್ಧಿಪಡಿಸುವವರೆಗೂ ವಿಶ್ರಮಿಸುವುದಿಲ್ಲ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!