ಕರ್ನಾಟಕ ವಿಧಾನ ಸಭೆ ಅಧಿವೇಶನಕ್ಕೆ ಕ್ಷಣ ಗಣನೆ / 2021-22ನೇ ಸಾಲಿನ ಆಯವ್ಯಯ ಮಂಡಿಸಲಿರುವ ಸಿಎಂ ಯಡಿಯೂರಪ್ಪ / ಹರಿಲೇಖನಿಯಲ್ಲಿ ನೇರ ಪ್ರಸಾರ

ಬೆಂಗಳೂರು:  ಕೋವಿಡ್-19 ತಂದೊಡ್ಡಿರುವ ಸಂಕಷ್ಟ ಮತ್ತು ಆರ್ಥಿಕ ಹಿಂಜರಿತದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್‌ ಮಂಡಿಸಲಿದ್ದಾರೆ.

ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ 8ನೇ ಬಜೆಟ್‌ ಮಂಡಿಸಲು ತಯಾರಾಗಿದ್ದು, ಈ ಸಲದ ಬಿಜೆಪಿ ಸರಕಾರದ ಎರಡನೇ ಬಜೆಟ್‌ ಸೋಮವಾರ ಮಂಡನೆಯಾಗುತ್ತಿದೆ. ಈ ಸಲವೂ ಕಳೆದ ಬಾರಿಯಂತೆಯೇ ಬಿ.ಎಸ್.ಯಡಿಯೂರಪ್ಪರ ಮುಂದೆ ಸವಾಲುಗಳ ಬೆಟ್ಟವೇ ಇದ್ದು, ಹೇಗೆ ನಿಭಾಯಿಸಲಿದ್ದಾರೆ ಎಂಬುದು ಸದ್ಯದ ಕುತೂಹಲ.

ಪ್ರವಾಹ ಹಾಗೂ ಬರ ಪರಿಸ್ಥಿತಿ ಕಾರಣದಿಂದ 2020-21ರ ಮುಂಗಡ ಪತ್ರ ಮಂಡಿಸುವಾಗಲೂ ಇಕ್ಕಟ್ಟಿನ ಪರಿಸ್ಥಿತಿಯಿತ್ತು. ಅದರ ಬೆನ್ನಿಗೇ ಕೊರೊನಾ ಬಂದದ್ದರಿಂದ ರಾಜ್ಯದ ಅಭಿವೃದ್ಧಿ ಚಟುವಟಿಕೆಯೇ ನಿಂತು ಹೋಗುವಂತಾಗಿತ್ತು. ಆರ್ಥಿಕ ವರ್ಷದ ಪ್ರಾರಂಭದಲ್ಲೇ ಕೊರೊನಾದಿಂದಾಗಿ ಹೊಡೆತ ಬಿದ್ದಿದ್ದರಿಂದ ಏಪ್ರಿಲ್‌, ಮೇನಲ್ಲಿ ತೆರಿಗೆ ಸಂಗ್ರಹದಲ್ಲಿ ಬಹುತೇಕ ಶೂನ್ಯ ಸಾಧನೆಯಾಗಿತ್ತು. ಆ ಬಳಿಕ ನಿಧಾನವಾಗಿ ಚೇತರಿಕೆ ಕಂಡಿದೆ.

ಈ ನಡುವೆಯೂ ಸ್ವಂತ ತೆರಿಗೆ ರಾಜಸ್ವದಲ್ಲಿ 2021ರ ಜನವರಿ ಅಂತ್ಯದವರೆಗೆ ಶೇ.67.62ರಷ್ಟು ಮಾತ್ರ ಗುರಿ ಸಾಧನೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ ಶೇ.80ಕ್ಕೂ ಹೆಚ್ಚು ತೆರಿಗೆ ಸಂಗ್ರಹವಾಗಬೇಕಿತ್ತು. ಇದು ರಾಜ್ಯದ ಆರ್ಥಿಕ ಸ್ಥಿತಿ ಚಿಂತಾಜನಕ ಆಗಿರುವುದರುವುದು ಸುಳ್ಳಲ್ಲ.

ಈ ಸನ್ನಿವೇಶದಲ್ಲಿ ಹೊಸ ಬಜೆಟ್‌ ಕಟ್ಟುವುದು ಸವಾಲಿನದ್ದಾಗಿದೆ. ಕೋವಿಡ್‌ ನಂತರದಲ್ಲಿ ಈಗಷ್ಟೇ ವ್ಯಾಪಾರ, ವಹಿವಾಟು ಚುರುಕುಗತಿ ಪಡೆಯುತ್ತಿದೆ. ಆದರೆ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳದಿಂದ ಅಗತ್ಯ ವಸ್ತುಗಳ ದರ ಏರಿಕೆಯೂ ಆಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ನೇರವಾಗಿ ಬಿಸಿ ತಟ್ಟುತ್ತಿದೆ. ಇಂತಹ ಸಂದರ್ಭದಲ್ಲಿ ತೆರಿಗೆ ಹೆಚ್ಚಳ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರೂ ತೆರಿಗೆ ಹೆಚ್ಚಳವಿಲ್ಲ ಎಂಬ ಭರವಸೆ ನೀಡಿದ್ದಾರೆ. ಆದರೆ ಬಜೆಟ್ ಮೇಲೆ ಜನತೆಯ ನಿರೀಕ್ಷೆ ಹೆಚ್ಚಿರುವುದು ಸುಳ್ಳಲ್ಲ.

ಬಜೆಟ್ ಮಂಡನೆ ನೇರ ಪ್ರಸಾರವನ್ನು ಹರಿತಲೇಖನಿಯಲ್ಲಿ ವೀಕ್ಷಿಸಿ.

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]