ದೊಡ್ಡಬಳ್ಳಾಪುರ: ಕರೊನಾ ಆರ್ಥಿಕ ಸಂಕಷ್ಟದ ನಡುವೆಯೂ, ಸಾರ್ವಜನಿಕರಿಗೆ ತೆರಿಗೆಯ ಹೊರೆಯನ್ನು ಹೇರದೆ, ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ತಲುಪುವಂತ ಬಜೆಟ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಹೆಚ್.ಎಸ್.ಶಿವಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಜೆಟ್ – 2021ರ ಕುರಿತು ಹರಿತಲೇಖನಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಈ ಕುರಿತು ಮಾತನಾಡಿರುವ ಅವರು, ಕೋವಿಡ್-19ನಿಂದ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದಿದೆ. ಅಲ್ಲದೆ ರಾಜ್ಯದ ಆರ್ಥಿಕ ಪ್ರಗತಿ ಉತ್ತಮ ರೀತಿಯಲ್ಲಿ ಪ್ರಗತಿ ಹೊಂದುತ್ತಿದ್ದು, ಇದಕ್ಕೆ ಅನುಗುಣವಾಗಿ ಎಲ್ಲಾ ಕ್ಷೇತ್ರಗಳಿಗೆ ನ್ಯಾಯ ಸಮ್ಮತವಾದ, ಜನಪರ ಬಜೆಟನ್ನು ಇಂದು ಯಡಿಯೂರಪ್ಪ ಅವರು ಮಂಡಿಸಿದ್ದಾರೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….