ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ 2021ನೇ ಸಾಲಿನ ಬಜೆಟ್ ನಲ್ಲಿ ದಲಿತರಿಗೆ ಸಾಮಾಜಿಕ ನ್ಯಾಯ ದೊರಕಲಿಲ್ಲವೆಂದು ಶ್ರೀ ಮಾದಾರ ಚನ್ನಯ್ಯ ಮಹಾ ಸಭಾದ ತಾಲೂಕು ಅಧ್ಯಕ್ಷ ಆದಿತ್ಯನಾಗೇಶ್ ಆರೋಪಿಸಿದ್ದಾರೆ.
ರಾಜ್ಯ ಬಜೆಟ್ – 2021ರ ಕುರಿತು ಹರಿತಲೇಖನಿಗೆ ನೀಡಿರುವ ಹೇಳಿಕೆಯಲ್ಲಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಅವರು, ಆದಿ ಜಾಂಬವ ನಿಗಮ, ಡಾ.ಬಿ.ಆರ್.ಅಂಬೇಡ್ಕರ್ ನಿಗಮ, ಅಲ್ಪಸಂಖ್ಯಾತರ ನಿಗಮ, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಸೇರಿದಂತೆ ತಳ ಸಮುದಾಯದ ಅಭಿವೃದ್ಧಿಗೆ ಈ ಬಜೆಟ್‌ನಲ್ಲಿ ಯಾವುದೇ ಪೂರಕ ಯೋಜನೆ ನೀಡದೆ ವಂಚಿಸಲಾಗಿದೆ ಎಂದಿರುವ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದ ವೇಳೆ ದಲಿತರ ಪರವಾಗಿ ನೀಡಿದ್ದ ಯೋಜನೆಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಕಡೆಗಣಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..