ದೊಡ್ಡಬಳ್ಳಾಪುರ: ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ವತಿಯಿಂದ ನಗರದ ಪಕ್ಷದ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸದಸ್ಯೆ ಪದ್ಮಾವತಿ ಬಿ.ಮುನೇಗೌಡ ರವರು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದೇವರಾಜಮ್ಮ ಮಾತನಾಡಿ, ಪುರುಷ ಪ್ರಧಾನವಾಗಿರುವ ನಮ್ಮ ಸಮಾಜದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತಿದ್ದು, ಮಹಿಳೆಯರು ಪುರುಷರಿಗೆ ಸರಿಸಾಟಿಯಾಗುವ ದಿಕ್ಕಿನಲ್ಲಿ ಸಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮಹಿಳೆಯರಿಗೆ ಸೂಕ್ತ ಅವಕಾಶ ದೊರೆತಾಗ ಮಾತ್ರ ಅವರಲ್ಲಿನ ಪ್ರತಿಭೆ ಹೊರಹೊಮ್ಮಲಿದೆ. ಕುಟುಂಬ ಹಾಗೂ ಸಮಾಜದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ರಾಮಲಕ್ಷ್ಮಮ್ಮ , ತಾಲೂಕು ಅಧ್ಯಕ್ಷೆ ಶಾಂತಮ್ಮ, ಸಂಘಟನಾ ಕಾರ್ಯದರ್ಶಿ ನಾಗರತ್ನಮ್ಮ, ಮುಖಂಡರಾದ ವೆಂಕಟಲಕ್ಷ್ಮಮ್ಮ, ಶಶಿಕಲಾ, ರೇಷ್ಮಾ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….