
ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿನ, ಹಾಡೋನಹಳ್ಳಿ ಗ್ರಾಮದ ಹೊಂಗೆ ಎಣ್ಣೆ ಮಿಲ್ ಬಳಿ, ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಗುದ್ದಿ ಪರಾರಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನನ್ನು ಕಲ್ಲಿಕೋಟೆ ಗ್ರಾಮದ ರಾಮಕೃಷ್ಣ (55) ಎಂದು ಗುರುತಿಸಲಾಗಿದ್ದು, ಇವರನ್ನು ಸ್ಥಳೀಯರು ಚಿಕಿತ್ಸೆಗೆ ಕಳಿಹಿಸಿಕೊಟ್ಟಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

