
ದೊಡ್ಡಬಳ್ಳಾಪುರ: ತಾಲ್ಲೂಕು ವಕೀಲರ ಸಂಘದ ವತಿಯಿಂದ ಮಾ.10 ರಂದು ಬೆಳಿಗ್ಗೆ 10 ಗಂಟೆಗೆ ನವೀಕೃತಗೊಂಡಿರುವ ವಕೀಲರ ಸಂಘದ ಹೆರಿಟೇಜ್ ಸಭಾಂಗಣ ಉದ್ಘಾಟನ ಸಮಾರಂಭ ನಡೆಯಲಿದೆ.

ಸಭಾಂಗಣವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಟಿ.ವೆಂಕಟೇಶ್ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯಅತಿಥಿಗಳಾಗಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಭಾಗವಹಿಸಲಿದ್ದಾರೆ. 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಚಂದ್ರಶೇಖರ್,ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಧೀಶರಾದ ಎಂ.ಬಿ.ಕುಲಕರ್ಣಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಬೈರೇಗೌಡ ವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

