ದೊಡ್ಡಬಳ್ಳಾಪುರದಲ್ಲಿ ವಕೀಲರ ಸಂಘದ ಹೆರಿಟೇಜ್ ಸಭಾಂಗಣದ ಉದ್ಘಾಟನೆ / ಪ್ರಕರಣಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ: ನ್ಯಾಯಾಧೀಶರಾದ ಟಿ.ವೆಂಕಟೇಶ್ ನಾಯಕ್

ದೊಡ್ಡಬಳ್ಳಾಪುರ: ನ್ಯಾಯಾಲಯಗಳಲ್ಲಿ 2 ವರ್ಷಕ್ಕೂ ಅಧಿಕ ಅವಧಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಕುರಿತಂತೆ ಉಚ್ಛ ನ್ಯಾಯಾಲಯದ ನಿಯಮಗಳು ಬದಲಾಗಿದ್ದು, ಪ್ರಕರಣಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಟಿ.ವೆಂಕಟೇಶ್ ನಾಯಕ್ ಹೇಳಿದರು.

ತಾಲೂಕು ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ನವೀಕೃತಗೊಂಡಿರುವ ವಕೀಲರ ಸಂಘದ ಹೆರಿಟೇಜ್ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಚ್ಛ ನ್ಯಾಯಾಲಯದ ಸೂಚನೆಯಂತೆ 2 ವರ್ಷಕ್ಕೂ ಹೆಚ್ಚು ಕಾಲದ ಮೊದ್ದಮೆಗಳ ಸ್ಥಿತಿಗಳನ್ನು ಅಪ್‍ಲೋಡ್ ಮಾಡಬೇಕಿದ್ದು, ಕಕ್ಷೀದಾರರಿಗೆ ವಿಳಂಬವಾಗದಂತೆ ಸೂಕ್ತ ಸಮಯದಲ್ಲಿ ಮೊಕದ್ದಮೆಗಳನ್ನು ಇತ್ಯರ್ಥಪಡಿಸಿ ನ್ಯಾಯ ಒದಗಿಸುವುದು ವಕೀಲರ ಕರ್ತವ್ಯವಾಗಿದೆ. 

10 ವರ್ಷಗಳಿಗೂ ಹೆಚ್ಚಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಇದೇ ಮಾ.30ರಂದು ಲೋಕ ಅದಾಲತ್ ನಡೆಸಲಾಗುತ್ತಿದ್ದು, ಅದಾಲತ್‍ನಲ್ಲಿ ಎಲ್ಲಾ ವಕೀಲರು ಕ್ರಿಯಾಶೀಲರಾಗಿ ಭಾಗವಹಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ.

ಅದಾಲತ್‍ಗಳನ್ನು ನಡೆಸಿ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಲ್ಲಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಹಿಂದೆ ಮೊದಲ ಸ್ಥಾನದಲ್ಲಿತ್ತು. ಈಗ ಮತ್ತೆ ಮೊದಲ ಸ್ಥಾನಕ್ಕೆ ತರಲು ಶ್ರಮಿಸಬೇಕಿದೆ. ನ್ಯಾಯಾಲಯಗಳಲ್ಲಿ ಸರ್ಕಾರಿ ಅಭಿಯೋಜಕ ಹಾಗೂ ಸಹಾಯಕ ಅಭಿಯೋಜಕರ ಸಮ್ಮುಖದಲ್ಲಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ, ಅಭಿಯೋಜಕರು ನ್ಯಾಯಲಯಕ್ಕೆ ಬಂದಾಗ ದಿನಾಂಕ ಮುಂದೂಡುವಂತೆ ಮನವಿ ಮಾಡುವುದು ಬೇಡ ಎಂದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮಾತನಾಡಿ, ವಕೀಲರಿಗೆ ತಿಳಿಸದೇ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವುದು ನಿಲ್ಲಬೇಕು ಎಂದರು.

ಇತಿಹಾಸ ಹೊಂದಿರುವ ನ್ಯಾಯಾಲಯದ ಕಟ್ಟಡವೀಗ ವಕೀಲರ ಸಂಘದ ಹೆರಿಟೇಜ್ ಸಭಾಂಗಣವಾಗಿ ಮಾರ್ಪಟ್ಟಿರುವುದು ಅರ್ಥಪೂರ್ಣವಾಗಿದೆ. ಇದೇ ರೀತಿ ನೆಲಮಂಗಲ ಹಾಗೂ ಹೊಸಕೋಟೆಗಳಲ್ಲಿ ಸ್ವಂತ ಕಟ್ಟಡಗಳಾಗಬೇಕು. ವಕೀಲರಿಗೆ ಶಿಷ್ಯವೇತನವನ್ನು ಸರ್ಕಾರ ಹೆಚ್ಚು ಮಾಡಬೇಕಿದೆ. ವಕೀಲರಿಗೆ ಹಾಗೂ ಕಕ್ಷೀದಾರರಿಗೆ ಮೂಲ ಸೌಕರ್ಯವನ್ನು ಒದಗಿಸುವುದು ಸರ್ಕಾರದ ಹೊಣೆಯಾಗಿದೆ ಎಂದರು.

ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಧೀಶರಾದ ಎಂ.ಬಿ.ಕುಲಕರ್ಣಿ ಮಾತನಾಡಿ, ಈ ಹಿಂದೆ ವಕೀಲರ ಸಂಘಗಳು ಎರಡಾಗಿ, ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸಂಘಗಳನ್ನು ಒಂದುಗೂಡಿಸುವುದನ್ನು ಸವಾಲಾಗಿ ಸ್ವೀಕರಿಸಿ ಸಂಘವನ್ನು ಒಂದು ಮಾಡಲಾಯಿತು. ಈಗ ಸಂಘಗಳು ಒಟ್ಟಾಗಿರುವುದು ಸಂತಸ ತಂದಿದೆ. ವಕೀಲರು ಒಂದೇ ಕುಟುಂಬದಂತೆ ಇದ್ದು, ಸಂಘದ ಮೂಲಕ ತಮ್ಮ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಬೇಕಿದೆ ಎಂದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಬೈರೇಗೌಡ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ನ್ಯಾಯಾಧೀಶರು ಹಾಗೂ ಹಿರಿಯ ವಕೀಲರನ್ನು ಸನ್ಮಾನಿಸಲಾಯಿತು.

ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಉಪಾಧ್ಯಕ್ಷ  ಎಚ್.ಎಂ.ಮಂಜುನಾಥ್, ಜಂಟಿ ಕಾರ್ಯದರ್ಶಿ  ಬಿ.ಎಸ್.ರೇಖಾ, ಖಜಾಂಚಿ ಎ.ವಿ.ಮುರಳೀಧರ, ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]