
ಬೆಂ.ಗ್ರಾ.ಜಿಲ್ಲೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಆರೋಗ್ಯ ಕಾರ್ಯಕರ್ತರು ಮತ್ತು ಇತರೆ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ.

ಪ್ರಸ್ತುತ 60 ವರ್ಷ ಮೇಲ್ಪಟ್ಟವರು ಹಾಗೂ 45-59 ವರ್ಷದ ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತದೊತ್ತಡ, ಶ್ವಾಸಕೋಶ, ಮೂತ್ರ್ರಪಿಂಡ, ಯಕೃತ್(Liver) ಸಂಬಂಧಿಸಿದ ಖಾಯಿಲೆ ಹಾಗೂ ಇತರೆ ದೀರ್ಘಾವಧಿ ಖಾಯಿಲೆಗಳಿಂದ ಬಳಲುತ್ತಿರುವ ನಾಗರೀಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಫಲಾನುಭವಿಗಳು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್ ಲಸಿಕೆ ಬಗ್ಗೆ ಮಾಹಿತಿ ಪಡೆದು ಲಸಿಕೆಯನ್ನು ಹಾಕಿಸಿಕೊಳ್ಳಬಹುದಾಗಿದೆ.
ಫಲಾನುಭವಿಗಳು ಸ್ವಯಂ ಪ್ರೇರಿತರಾಗಿ Online ಮುಖಾಂತರ ಲಸಿಕೆಗಾಗಿ ನೊಂದಾಯಿಸಿಕೊಳ್ಳಲು ವೆಬ್‍ಸೈಟ್ www.cowin.gov.in (https://selfregistration.cowin.gov.in/) ಅನ್ನು ಬಳಸಿಕೊಳ್ಳಬಹುದು ಅಥವಾ ಫಲಾನುಭವಿಗಳು ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿನ ಸಿಂಬ್ಬಂದಿಗಳನ್ನು ಸಂಪರ್ಕಿಸಿ ಸ್ಥಳದಲ್ಲಿಯೇ (On spot Registration) ನೋಂದಣಿ ಮಾಡಿಸಿಕೊಳ್ಳುವ ಮೂಲಕ ಲಸಿಕೆ ಪಡೆಯಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಸಮುದಾಯ ಆರೋಗ್ಯ ಕೇಂದ್ರ ವಿಜಯಪುರ, ನೆಲಮಂಗಲ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ ಹಾಗೂ ಇತರೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಹಾಗೂ ಖಾಸಗಿ ಆಸ್ಪತ್ರೆಗಳಾದ ದೇವನಹಳ್ಳಿಯ ಆಕಾಶ್ ಆಸ್ಪತ್ರೆ, ರಾಮಯ್ಯ ಲೀನಾ ಆಸ್ಪತ್ರೆ/ ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆ, ನೆಲಮಂಗಲದ ರಾಮಯ್ಯ ಹರ್ಷ ಆಸ್ಪತ್ರೆಗಳಲ್ಲಿಯೂ ಸಹ ಕೋವಿಡ್-19 ಲಸಿಕೆ ಲಭ್ಯವಿದ್ದು, 250/- ರೂ. ಗಳನ್ನು ಪಾವತಿಸಿ ಲಸಿಕೆ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೋವಿಡ್ ವಾರ್ ರೂಂ ದೂರವಾಣಿ ಸಂಖ್ಯೆ: 080-29569449, ಕೋವಿಡ್-19 ಕಂಟ್ರೋಲ್ ರೂಂ. ದೂರವಾಣಿ ಸಂಖ್ಯೆ: 080-29781021 ಹಾಗೂ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ: 1075 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುಳಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

