
ಗೌರಿಬಿದನೂರು: ತಾಲ್ಲೂಕಿನ ವಿಧುರಾಶ್ವತ್ಥ ಗೇಟ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಕಾರ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತನನ್ನು ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನ ಪಾಳ್ಯದ ಪುಟ್ಟರಾಜ (60) ಎಂದು ಗುರುತಿಸಲಾಗಿದ್ದು, ಹಿಂಬದಿಯ ಸವಾರ ಗುಂಡಪ್ಪನಾಯಕನಹಳ್ಳಿ ನಿವಾಸಿ ಕುಮಾರ್ ಎನ್ನುವವರಿಗೆ ತಲೆಗೆ ತೀವ್ರ ಪೆಟ್ಟಾಗಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

