
ಬೆಂಗಳೂರು: ಜೆಡಿಎಸ್ ಮುಖಂಡರಾದ ಮಧುಬಂಗಾರಪ್ಪ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವ ಮಧು ಬಂಗಾರಪ್ಪ ಅವರು ಇಂದು ನನ್ನನ್ನು ಭೇಟಿಿ ಮಾಡಿ ಮಾತುಕತೆ ನಡೆಸಿದರು ಎಂದು ಸಿದ್ದರಾಮಯ್ಯ ಫೇಸ್ಬುಕ್ ಅಲ್ಲಿ ಬರೆದು ಕೊಂಡಿದ್ದಾರೆ.

ಗುರುವಾರ ಮಧುಬಂಗಾರಪ್ಪ ಅವರು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇತ್ತೀಚೆಗೆ ಜೆಡಿಎಸ್ ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ಮಧು ಬಂಗಾರಪ್ಪ ಅವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಮಧುಬಂಗಾರಪ್ಪ ಜೆಡಿಎಸ್ ಪಕ್ಷದ ಬಗ್ಗೆ ಬೆಸರಗೊಂಡಿದ್ದಾರೆ ಎನ್ನಲಾಗುತ್ತಿದೆ. ಬಹಿರಂಗವಾಗಿ ಅವರು ಈ ಬಗ್ಗೆ ಹೇಳಿಕೆ ನೀಡದೇ ಇದ್ದರೂ ಆತಂಕರಿಕವಾಗಿ ಪಕ್ಷದ ಕಾರ್ಯವೈಖರಿಯ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನುತ್ತದೆ ಮೂಲಗಳು.
ಅದರಂತೆ ಅವರು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಾರೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

