ದೊಡ್ಡಬಳ್ಳಾಪುರದಲ್ಲಿ ನಕಲಿ ಫೇಸ್ಬುಕ್ ಖಾತೆ ಬಳಸಿ ಖದೀಮರಿಂದ ಹಣದ ಬೇಡಿಕೆ / ಮುಂಜಾಗ್ರತೆವಹಿಸಿ, ದೂರು‌ ನೀಡಿ: ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್

ದೊಡ್ಡಬಳ್ಳಾಪುರ: ಪ್ರಮುಖರ ನಕಲಿ ಫೇಸ್‌ಬುಕ್‌ ಖಾತೆ ತೆರೆಯುತ್ತಿರುವ ಆನ್‌ಲೈನ್‌ ಖದೀಮರು, ಪರಿಚಿತರಿಗೆ ಮೆಸೆಂಜರ್‌ ಮೂಲಕ ಸಂದೇಶ ಕಳುಹಿಸಿ ತುರ್ತು ಕಾರಣ ಹಣ ವರ್ಗಾವಣೆ ಮಾಡಬೇಕೆಂದು ಬೇಡಿಕೆಯಿಡುತ್ತಿರುವ ಪ್ರಕರಣಗಳು ತಾಲೂಕಿನಲ್ಲಿ ತೀವ್ರವಾಗುತ್ತಿವೆ.

ಪ್ರಭಾವಿಗಳ ನೈಜ ಖಾತೆಯಲ್ಲಿನ ಪೋಟೋಗಳನ್ನು, ಪ್ರೊಫೈಲ್‌ ಫೋಟೊ ಆಗಿ ಬಳಸುತ್ತಿರುವ ಖದೀಮರು ಮತ್ತೊಂದು ಖಾತೆ ಸೃಷ್ಟಿಸಿ. ಅವರೊಂದಿಗೆ ಇರುವ ಸ್ನೇಹಿತರಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿ ಫ್ರೆಂಡ್‌ ಮಾಡಿಕೊಳ್ಳುತ್ತಿದ್ದಾರೆ. ನಂತರ ಅನುಮಾನ ಬಾರದಂತೆ ಎಫ್‌ಬಿ ಮೆಸೆಂಜರ್‌ ಮೂಲಕ ತುರ್ತು ಕಾರಣವಿದೆ ಫೋನ್‌ ಪೇ, ಗೂಗಲ್ ಫೇ ಮೂಲಕ ಹಣ ಕಳಿಸಿ ನಾಳೆ ಕೊಡುವೆ ಎಂದು ಸಂದೇಶ ಕಳಿಸುತ್ತಿದ್ದಾರೆ. ವಾಸ್ತವ ತಿಳಿಯದೆ ಮೆಸೇಜ್ ಬಂದ ಕೂಡಲೆ ಆತ್ಮೀಯರಿಗೆ ಕಷ್ಟವೆಂದು ಅಮೌಂಟ್ ಕಳಿಸುತ್ತಾರೆಂದು ಷಡ್ಯಂತ್ರ ರೂಪಿಸಿದ್ದಾರೆ‌.

ಬುಧವಾರ ರಾತ್ರಿ ಜೆಡಿಎಸ್ ಪಕ್ಷದ ಮುಖಂಡ ಬೀಡಿಗೆರೆ ಗೌರಿಶಂಕರ್ ಹೆಸರಲ್ಲಿ ಹಲೋ. ಹೌ ಆರ್ ಯು? ಎಂದು ವಿನಾಯಕನಗರ ಕೃಷ್ಣಮೂರ್ತಿ ಎನ್ನುವವರಿಗೆ ಮೆಸೇಜ್‌ ಮಾಡಿರುವ ಖದೀಮರು, ‘ಗೂಗಲ್‌ ಪೇ ಅಥವಾ ಫೋನ್‌ ಪೇ ಬಳಸುತ್ತಿದ್ದೀರಾ. ತುರ್ತಾಗಿ 20 ಸಾವಿರ ಕಳುಹಿಸಿ’ ಎಂದು ಮೊಬೈಲ್ ನಂಬರ್ ನೀಡಿದ್ದಾರೆ. ‘ಆದರೆ ಜಾಲದ ಬಗ್ಗೆ ಅರಿತಿದ್ದ ಕೃಷ್ಣಮೂರ್ತಿ, ಗೌರಿ ಶಂಕರ್ ಅವರಿಗೆ ಕರೆ ಮಾಡಿದ್ದು, ಕಿರಾತಕರು ಮಾಡಿರುವ ಷಡ್ಯಂತ್ರ ಬಯಲಾಗಿದೆ.

ಇದೇ ರೀತಿ ಗೌರಿ ಶಂಕರ್ ಅವರ ಅನೇಕ ಗೆಳೆಯರಿಗೆ ಮೆಸೇಜ್ ಮಾಡಿರುವ ಖದೀಮರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಲು ಗೌರಿಶಂಕರ್ ಮುಂದಾಗಿದ್ದಾರೆ.

ಈ ರೀತಿಯ ಪ್ರಕರಣಗಳು ರಾಜಧಾನಿ ಬೆಂಗಳೂರು ಸುತ್ತಮುತ್ತಾ ಹೆಚ್ಚಾಗಿತ್ತು. ಪೊಲೀಸರ ಖಾತೆಯನ್ನೆ ನಕಲಿ ಮಾಡಿ ಹಣ ಪೀಕಿರುವ ಖದೀಮರು, ಈಗ ಗ್ರಾಮೀಣ ಭಾಗದಲ್ಲಿ ತಮ್ಮ ಕುತಂತ್ರವನ್ನು ಶುರು ಮಾಡಿದ್ದು, ಫೇಸ್ಬುಕ್ ಬಳಕೆದಾರರು ಮುಂಜಾಗ್ರತೆ ವಹಿಸಬೇಕಿದೆ. ಮೆಸೇಜರ್ ಮೂಲಕ ಹಣಕ್ಕೆ ಬೇಡಿಕೆ ಯಾರೇ ಇಟ್ಟರು, ಖುದ್ದಾಗಿ ಕರೆ ಮಾಡಿ ವಾಸ್ತವ ಅರಿಯಬೇಕಿದೆ. ಅಲ್ಲದೆ ಫೇಸ್ಬುಕ್ ಬಳಕೆದಾರರು ಸೆಕ್ಯುರಿಟಿ ಅಳವಡಿಸಿ ಪೊಟೋಗಳು ಅನ್ಯರು ದುರುಪಯೋಗ ಮಾಡಿಕೊಂಡು ವಂಚನೆಗೆ ಒಳಗಾಗುವುದನ್ನು ತಡೆಯಬೇಕಿದೆ.

ಪೊಲೀಸ್ ಠಾಣೆಗೆ ದೂರು ನೀಡಿ: ಇತ್ತೀಚೆಗೆ ಸಾಮಾಜಿಕ ಜಾಲತಾಣ ಬಳಕೆ ತೀವ್ರವಾಗಿದ್ದು, ಖದೀಮರು ಇದನ್ನು ದುರುಪಯೋಗ ಪಡಿಸಿಕೊಂಡು ಹಣ ಕೀಳಲು ಮುಂದಾಗಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಕುರಿತು ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದೆ. ಯಾರಾದರೂ ಈ ರೀತಿ ಮೋಸಕ್ಕೆ ಒಳಗಾಗಿದ್ದರೆ, ಕೂಡಲೇ ಪೊಲೀಸ್ ಠಾಣೆಯಲ್ಲಿ ದೂರು‌ ದಾಖಲು ಮಾಡಬೇಕು, ಈ ಕುರಿತು ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸಿ ಖದೀಮರನ್ನು ಬಂಧಿಸಲು ಅನುಕೂಲವಾಗಲಿದೆ. ಅಲ್ಲದೆ ಸಾರ್ವಜನಿಕರು ಇಂತಹ ಷಡ್ಯಂತ್ರಕ್ಕೆ ಬಲಿಯಾಗುವ ಮುನ್ನ ಮುಂಜಾಗ್ರತೆವಹಿಸಬೇಕಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]