
ದೊಡ್ಡಬಳ್ಳಾಪುರ: ಮಹಾ ಶಿವರಾತ್ರಿ ಆಚರಣೆ ಸಂಬಂಧ ನಗರದ ಶಿವ ದೇವಾಲಯಗಳು ವಿಶೇಷ ಅಲಂಕಾರಗಳಿಂದ ಸಜ್ಜಾಗಿದ್ದು, ಗುರುವಾರ ಮುಂಜಾನೆಯಿಂದಲೇ ರುದ್ರಾಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಅರಂಭವಾಗಿವೆ.

ವಿವಿಧ ಸಂಘ–ಸಂಸ್ಥೆಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಗಳು ಜಾಗರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿವೆ.
ಶ್ರೀ ನಗರೇಶ್ವರಸ್ವಾಮಿ ದೇವಾಲಯ,ಶ್ರೀಸ್ವಯಂಭುವೇಶ್ವರ ದೇವಾಲಯ, ತೇರಿನಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ, ಡಿಕ್ರಾಸ್ ರಸ್ತೆಯಲ್ಲಿರುವ ಕಾಶಿವಿಶ್ವೇಶ್ವರ ದೇವಾಲಯ, ಬಸವಣ್ಣ ದೇವಾಲಯ, ಶ್ರೀರಾಮಲಿಂಗಚಂದ್ರ ಚೌಡೇಶ್ವರಿ ದೇವಾಲಯ, ಬಯಲು ಬಸವಣ್ಣ ದೇವಾಲಯ, ವಿನಾಯಕ ದೇವಾಲಯ, ಅಭಯಚೌಡೇಶ್ವರಿ ದೇಗುಲ, ಕಾಳಿಕಾ ಕಮಟೇಶ್ವರ ದೇವಾಲಯ, ದೊಡ್ಡಹೆಜ್ಜಾಜಿಯ ಕಾಶಿವಿಶ್ವನಾಥ ದೇವಾಲಯ, ವೀರಭದ್ರ ಸ್ವಾಮಿ ದೇವಾಲಯ, ವಡ್ಡನಹಳ್ಳಿ ಈಶ್ವರ ದೇವಾಲಯ, ಆರೂಢಿಯ ಕೋಡಿ ಮಲ್ಲೇಶ್ವರ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶಿವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ.
ವಿಶೇಷ ಪೂಜೆ, ಪುನಸ್ಕಾರ ಮತ್ತು ರುದ್ರಾಭಿಷೇಕ, ಕ್ಷೀರಾಭಿಷೇಕ, ಬಿಲ್ವ ಪತ್ರೆ ಅರ್ಪಣೆ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಿಗೆ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರಿಗೆ ‘ಓಂ ನಮಃ ಶಿವಾಯ’ ಮಂತ್ರಗಳು, ಶಿವನಾಮ ಸ್ಮರಣೆ, ಜಪ, ತಪಗಳಿಗೆ ವ್ಯವಸ್ಥೆ ಮಾಡಲಾಗಿದೆ.
ಕೋವಿಡ್ ಕಾರಣ ಭಕ್ತರ ದಟ್ಟಣೆ ತಡೆಯಲು ದೇವಸ್ಥಾನದ ಆಡಳಿತ ಮಂಡಳಿಗಳು ದೇವಾಲಯದ ಆವರಣಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಕೆ ಮಾಡಿವೆ. ತಳಿರು, ತೋರಣ ಹಾಗೂ ವಿದ್ಯುತ್ ದೀಪಗಳಿಂದ ದೇವಸ್ಥಾನಗಳು ಅಲಂಕಾರಗೊಂಡಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

