
ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಕೋವಿಡ್-19 ಲಸಿಕೆ ಪಡೆದರು.

ಕೋವಿಡ್-19 ಲಸಿಕೆ ಪಡೆದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಅವರು ಲಸಿಕೆ ಸುರಕ್ಷಿತವಾಗಿದ್ದು, ಲಸಿಕೆ ಪಡೆಯುವುದರಿಂದ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ ಎಂದರಲ್ಲದೆ, ಸಾರ್ವಜನಿಕರು ಯಾವುದೇ ಊಹಾ-ಪೋಹಗಳಿಗೆ ಎಡೆಮಾಡಿಕೊಡದೇ ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ತಹಶಿಲ್ದಾರ್ ಟಿ.ಎಸ್.ಶಿವರಾಜ್ ಎರಡನೇ ಹಂತದ ಲಸಿಕೆ ಪಡೆದರು.
ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ಸೇರಿದಂತೆ ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

