
ಬೆಂ.ಗ್ರಾ.ಜಿಲ್ಲೆ: ಕಾರ್ಮಿಕ ಮಂಡಳಿ ವತಿಯಿಂದ *ಕಾರ್ಮಿಕ ಚಿಕಿತ್ಸಾ ಭಾಗ್ಯ* ಯೋಜನೆಯಡಿ ಕರ್ನಾಟಕದಲ್ಲಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಆರೋಗ್ಯ ಚಿಕಿತ್ಸೆಗೆ ರೂ.2,00,000(2ಲಕ್ಷ) ರವರೆಗೆ ಸಹಾಯಧನ ನೀಡಲಾಗುವುದು.

ಕಾರ್ಮಿಕ ಚಿಕಿತ್ಸಾ ಭಾಗ್ಯ ಯೋಜನೆಯಡಿ ಹೃದ್ರೋಗ, ಕಿಡ್ನಿ ಜೋಡಣೆ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಪಾರ್ಶ್ವವಾಯು, ಮೂಳೆ ಶಸ್ತ್ರಚಿಕಿತ್ಸೆ, ಗರ್ಭಕೋಶ ಶಸ್ತ್ರಚಿಕಿತ್ಸೆ, ಅಸ್ತಮಾ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿತ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ, ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಸರ್ ಚಿಕಿತ್ಸೆ, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ಇ.ಎನ್.ಟಿ. ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ನರರೋಗ ಶಸ್ತ್ರಚಿಕಿತ್ಸೆ, ವ್ಯಾಸ್ಕ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರಚಿಕಿತ್ಸೆ, ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಹರ್ನಿಯಾ ಶಸ್ತ್ರಚಿಕಿತ್ಸೆ, ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ, ಮೂಳೆ ಮುರಿತ/ ಡಿಸ್ ಲೊಕೇಶನ್ ಚಿಕಿತ್ಸೆ ಹಾಗೂ ಇತರೆ ಔದ್ಯೋಗಿಕ ಖಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುವುದು ಎಂದು ಕಾರ್ಮಿಕ ಕಲ್ಯಾಣ ಮಂಡಳಿಯ ಪ್ರಕಟಣೆ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

