ಬೆತ್ತಲೆ ಸತ್ಯ-ಸುಳ್ಳಿನ ಸೆರಗು / ಧರ್ಮಕ್ಕೆ ಜಾತಿಯೇ ಕೊಡಲಿ ಪೆಟ್ಟು: ಭಾಗ-೨

ಕಳೆದ ವಾರದ ಅಂಕಣದಲ್ಲಿ ಜಾತಿ,ಮೀಸಲಾತಿ, ಮತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು “ಸರ್ವಸಂಗ ಪರಿತ್ಯಾಗಿ ಕಾವಿಧಾರಿ”ಗಳ ಬಗ್ಗೆ ಬರೆದಿದ್ದೆ. ಅದರ ಮುಂದುವರಿದ ಭಾಗವಾಗಿ ಇಂದು ಖಾದಿದಾರರ ಬಗ್ಗೆ ಒಂದಿಷ್ಟು ಬರೆಯುವ ಇಂಗಿತ ನನ್ನದು.

ಪ್ರಜಾತಂತ್ರ ವ್ಯವಸ್ಥೆಯ ಪ್ರಮುಖ ಭಾಗ ಚುನಾವಣೆ. ಈ ಚುನಾವಣೆಗಳಲ್ಲಿ ಐದು ವರ್ಷಗಳಿಗೊಮ್ಮೆ ನಮ್ಮೂರಿನ/ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಒಂದು ಸಮರ್ಥ ನಾಯಕತ್ವವನ್ನು ಆಯ್ಕೆ ಮಾಡುವ ಮಹತ್ತರ ಅವಕಾಶ ನಮಗೆ/ಪ್ರಜೆಗಳಿಗೆ ಒದಗಿ ಬರುತ್ತದೆ. ಹಾಗೆ ಆಯ್ಕೆ ಆಗುವ ನಾಯಕನನ್ನು ಸಾಂವಿಧಾನಿಕವಾಗಿ 

“ಜನಪ್ರತಿನಿಧಿ” ಎನ್ನಲಾಗುತ್ತದೆ. ನಮ್ಮ ಸಹಜವಾಚನದಲ್ಲಿ “ರಾಜಕಾರಣಿ” ಎನ್ನುತ್ತೇವೆ. ಸಹಜವಾಗಿ ಚುನಾವಣೆಯಲ್ಲಿ ಚುನಾಯಿತರಾದ ಜನಪ್ರತಿನಿಧಿಗಳು “ಸಂವಿಧಾನದ ಆಶಯಗಳಿಗೆ ತಕ್ಕಂತೆ ಜಾತಿ ಬೇಧವಿಲ್ಲದೆ ಸರ್ವರ ಏಳಿಗೆಗಾಗಿ ಶ್ರಮಿಸುತ್ತೇವೆ ಎಂದು ಅಂತಃಕರಣವನ್ನು ಸಾಕ್ಷಿಯಾಗಿರಿಸಿ ಪ್ರಮಾಣ ಮಾಡುತ್ತಾರೆ”.

ಆದರೆ ವಾಸ್ತವವಾಗಿ ಯಾವ ರಾಜಕಾರಣಿಯೂ ಸಹ ಶೇಕಡಾ ನೂರರಷ್ಟು ನುಡಿದಂತೆಯೇ ನಡೆಯುವುದಿಲ್ಲ, ನಡೆಯಲಾಗುವುದೂ ಇಲ್ಲ.

ಯಾಕೆಂದರೆ, ನಮ್ಮ ಈಗಿನ ವ್ಯವಸ್ಥೆಯೇ ಹಾಗಿದೆ. ಸಂವಿಧಾನ ಶಿಲ್ಪಿಯ ಆಶಯಗಳು ಎಲ್ಲಿಯೂ ಒಂದಂಶವೂ ಸಾಕಾರವಾಗದಂತೆ ತಡೆಹಿಡಿಯುವಲ್ಲಿ ವರ್ತಮಾನದ ರಾಜಕೀಯ ವ್ಯವಸ್ಥೆ ತಕ್ಕಮಟ್ಟಿಗೆ ಯಶಸ್ವಿಯಾಗಿದೆ. ಜಾತಿ ಗೀತಿಗಳ ಮೀರಿ ಸರ್ವ ಜನಜೀವನ ಉತ್ತಮಗೊಳಿಸುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸುವ ರಾಜಕಾರಣಿಗಳು ಅದೇ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚಿ ಅದೇ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುತ್ತಾರೆ. ಇದರಲ್ಲಿ ಆಡಳಿತ, ವಿರೋಧ ಪಕ್ಷಗಳೆಂಬ ಯಾವ ವ್ಯತ್ಯಾಸವೂ ಇಲ್ಲ. ಬೇರಿನಿಂದ ಚಿಗುರಿನವರೆಗೂ ಎಲ್ಲಾ ಕ್ಷೇತ್ರಗಳಲ್ಲೂ ಸೇರಿದಂತೆ ಇಡೀ ಆಡಳಿತ ವ್ಯವಸ್ಥೆಯಲ್ಲಿ ” ಜಾತಿ” ಎಂಬ ವಿಷವರ್ತುಲ ಅಧಿಕೃತವಾಗಿ ಸುತ್ತಿಕೊಂಡಿದೆ. ಮಹಾಮಾರಿ ಕೋವಿಡ್ ಸಂಕಷ್ಟದಲ್ಲಿ ಉದ್ಯೋಗ, ವ್ಯಾಪಾರಗಳನ್ನು ಕಳೆದುಕೊಂಡ ಅನೇಕ ಮಧ್ಯಮ ವರ್ಗದ ಎಲ್ಲಾ ಜಾತಿಯ ಕುಟುಂಬಗಳು ತಿನ್ನಲು ತುತ್ತು ಅನ್ನವಿಲ್ಲದೇ ಬೀದಿಯಲ್ಲಿ ನರಳುತ್ತಿರುವಾಗ, ಅದೇ ಎಲ್ಲಾ ಜಾತಿಯ ಜನಗಳಿಂದ ಮತ ಪಡೆದು ಆಯ್ಕೆಯಾಗಿರುವ ಶಾಸಕ,ಸಂಸದರನೇಕರು

(ಮಂತ್ರಿಗಳೂ ಸೇರಿ) ತಮ್ಮ ತಮ್ಮ ಜಾತಿಗಳಿಗೆ ಮೀಸಲಾತಿ ಗಿಟ್ಟಿಸಿಕೊಳ್ಳುವಲ್ಲಿ busy ಆಗಿದ್ದಾರೆ. ಜಾತಿಗಳಿಗೆ ಮೀಸಲಾತಿ ಕೇಳುವ ಬದಲಾಗಿ ಜಾತಿ ಬೇಧವಿಲ್ಲದೆ ತುತ್ತು ಅನ್ನಕ್ಕಾಗಿ ಮೀಸಲಾತಿಗೆ ಬೇಡಿಕೆ ಇಟ್ಟಿದ್ದರೆ, ಇದೇ ಜನಪ್ರತಿನಿಧಿಗಳು ಇವತ್ತು ಬಡವರ ಪಾಲಿನ ದೇವತೆಗಳಾಗಿಬಿಡುತ್ತಿದ್ದರು.

ಇಂತಹ ರಾಜಕಾರಣಿಗಳು ಧೈರ್ಯವಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವಾಗ ಧೈರ್ಯವಿದ್ದರೆ, “ನಮ್ಮ ಜಾತಿಗೆ ಮೀಸಲಾತಿ ತರುವ ಸಲುವಾಗಿ ಶ್ರಮಿಸುತ್ತಿದ್ದೇನೆ. ನಮ್ಮ ಜಾತಿಯವರು ಮಾತ್ರ ನನಗೆ ಮತ ನೀಡಿ” ಎಂದು ಹೇಳುತ್ತಾರೆಯೇ..!? ಕಾದು ನೋಡೋಣ ಇಂತಿ ನಿಮ್ಮವ..ಜಿ.ಎನ್.ಪ್ರದೀಪ್

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]