ಬೆಳಗಾವಿ ನಮ್ಮದು. ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಮತ್ತು ಶಿವಸೇನೆ ಕಾರ್ಯಕರ್ತರ ನಡುವೆ ಕನ್ನಡ ಧ್ವಜ ಹಾರಿಸುವ ವಿಚಾರವಾಗಿ ವಾದ-ಪ್ರತಿವಾದಗಳು ನಡೆಯುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ. ಬೆಳಗಾವಿ ನಮ್ಮದು.. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು ಎಂದಿದ್ದಾರೆ.

ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ.

ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ.

ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ.

ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ.  ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ.

ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು.

ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ? ಎಂದು ಪ್ರಶ್ನಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]