
ದೊಡ್ಡಬಳ್ಳಾಪುರ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಒ ಮುರುಡಯ್ಯ ಅಧ್ಯಕ್ಷತೆಯಲ್ಲಿ ಗ್ರಾಪಂ ಪಿಡಿಒಗಳ ಸಭೆ ನಡೆಸಲಾಯಿತು.

ಈ ವೇಳೆ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆ, ಮನೆಗಳಿಂದ ತ್ಯಾಜ್ಯ ಸಂಗ್ರಹ, ತ್ಯಾಜ್ಯ ನೀಡಲು ಗ್ರಾನಸ್ಥರಿಗೆ ಅರಿವು, ತ್ಯಾಜ್ಯ ಸಂಗ್ರಹ ವಾಹನಗಳ ಬಳಕೆ, ಶೇ.100ರಷ್ಟು ತೆರಿಗೆ ಸಂಗ್ರಕ್ಕೆ ಒತ್ತು ನೀಡುವುದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶೇ.25ರ ಅನುದಾನ ಹಾಗೂ ವಿಕಲಚೇತನರ ಶೇ.5ರ ಅನುದಾನದ ಬಳಕೆಯ ಮಾಹಿತಿ ನೀಡುವ ಕುರಿತು ಚರ್ಚೆ ನಡೆಸಲಾಯಿತು.
ಇದೇ ವೇಳೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಪಿಡಿಒ, ಕಾರ್ಯದರ್ಶಿಗಳಿಗೆ, ಅಕೌಂಟೆಂಟ್ ಎರಡು ದಿನಗಳ ಒಳಗಾಗಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ತಾಪಂ ಸಹಾಯಕ ನಿರ್ದೇಶಕ ಗಂಗಾರಾಜ್ ಸೇರಿಂದಂತೆ ಪಿಡಿಒಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

