
ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬೆಂಗಳೂರು ಗ್ರಾಮಾಂತರ, ಕೃಷಿ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಆತ್ಮ ನಿರ್ಭರ ಭಾರತ ಅಭಿಯಾನದ “ಪ್ರಧಾನಮಂತ್ರಿಗಳ ಅತಿ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ(PM-FME) ಅಂಗವಾಗಿ “ಒಂದು ಜಿಲ್ಲೆ ಒಂದು ಉತ್ಪನ್ನ” ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋಳಿ ಸಂಸ್ಕರಣಾ ಉತ್ಪನ್ನಗಳ ಘಟಕಗಳ ಸ್ಥಾಪಿಸಲು ಸಹಾಯಧನಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ “ಕೋಳಿ ಸಂಸ್ಕರಣಾ ಉತ್ಪನ್ನಗಳ” ಘಟಕಗಳು, ಮಾರಾಟ ಮತ್ತು ರಫ್ತು ಘಟಕಗಳನ್ನು ಸ್ಥಾಪಿಸುವ ಸಣ್ಣ ಉದ್ಯಮದವರಿಗಾಗಿ ಈ ಯೋಜನೆಯಡಿ ಸಹಾಯಧನವನ್ನು ನೀಡಲಾಗುವುದು.
ವೈಯಕ್ತಿಕ/ ರೈತ ಉತ್ಪಾದಕ ಸಂಸ್ಥೆ ನೋಂದಾಯಿತ ರೈತ ಸಂಸ್ಥೆ/ ಸ್ವಸಹಾಯ ಗುಂಪು/ ಸಹಕಾರ ಸಂಘಗಳಿಗೆ ಯೋಜನಾ ವೆಚ್ಚದ ಶೇ.35ರಷ್ಟು ಮೌಲ್ಯದ ಸಾಲ ಸಂಪರ್ಕವಿರುವ ಸಹಾಯಧನ, ರೂ. 10.00 ಲಕ್ಷದ ಗರಿಷ್ಟ ಮಿತಿ. ಫಲಾನುಭವಿ ಕೊಡುಗೆ ಕನಿಷ್ಠ 10% ರಷ್ಟಿರಬೇಕು. ಉಳಿಕೆ ಬಾಕಿ ಬ್ಯಾಂಕಿನ ಸಾಲ.
ಆಸಕ್ತ ಫಲಾನುಭವಿಗಳು, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ ಪೋರ್ಟಲ್: PMFME website link : http//pmfme.mofpi.gov.in, PMFME MIS website link : http//pmfme.mofpi.gov.in/mis ಇಲ್ಲಿ ಅರ್ಜಿಗಳನ್ನು ನೋಂದಾಯಿಸಬಹುದಾಗಿದೆ.
ಕೋಳಿ ಉತ್ಪನ್ನಗಳ ಹೊಸ ಘಟಕಗಳಿಗೆ ಅವಕಾಶ, ಚಾಲ್ತಿಯಲ್ಲಿರುವ ಎಲ್ಲಾ ಆಹಾರ ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲು ಮತ್ತು ವಿಸ್ತರಿಸಲು ಅವಕಾಶ, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯವರಾಗಿರಬೇಕು, ಅರ್ಜಿದಾರರು ಉದ್ಯಮದ ಮಾಲೀಕತ್ವ ಹೊಂದಿರಬೇಕು, ಉದ್ಯಮವು ಮಾಲೀಕತ್ವದ/ಪಾಲುದಾರಿಕೆ ಸಂಸ್ಥೆಯಾಗಿರಬೇಕು, ಅರ್ಜಿದಾರರು ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು ಕನಿಷ್ಟ 8ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಒಂದು ಕುಟುಂಬದಿಂದ ಕೇವಲ ಒಬ್ಬ ವ್ಯಕ್ತಿಗೆ ಮಾತ್ರ ಅವಕಾಶವಿರುತ್ತದೆ. ಯೋಜನಾ ವೆಚ್ಚ ಹಾಲಿ ವಹಿವಾಟಿಗಿಂತ ಹೆಚ್ಚಿರಬಾರದು. ಸ್ವಸಹಾಯ ಗುಂಪುಗಳಿಗೆ ಆದ್ಯತೆ ನೀಡಲಾಗುವುದು. ಉತ್ಪನ್ನ ನಿರ್ವಹಣೆಯಲ್ಲಿ ಕನಿಷ್ಟ 3 ವರ್ಷಗಳ ಜ್ಞಾನ ಮತ್ತು ಅನುಭವ ಹೊಂದಿರಬೇಕು.
ಆಸಕ್ತ ವೈಯಕ್ತಿಕ ಫಲಾನುಭವಿಗಳು, ಸಂಘ ಸಂಸ್ಥೆಗಳು ಎಫ್.ಪಿ.ಓ.ಗಳು ಸ್ವ ಸಹಾಯ ಗುಂಪುಗಳ ಸದಸ್ಯರು, ಒಕ್ಕೂಟಗಳು, ಸಹಕಾರಿ ಸಂಸ್ಥೆಗಳು, ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಮೊ.ಸಂ.: 9739868651 ಮತ್ತು ಮೊ.ಸಂ.: 9986117775 ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಮೊ.ಸಂ.: 8277929923 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

