
ಬೆಂ.ಗ್ರಾ.ಜಿಲ್ಲೆ: ಕರೊನಾ ಸೋಂಕಿತರ ಪ್ರಕರಣಗಳು ಜಿಲ್ಲೆಯಲ್ಲಿ ದಿನೆ ದಿನೆ ಏರಿಕೆಯಾಗುತ್ತಿದೆ.

ಭಾನುವಾರ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಕರೊನಾ ಬುಲೆಟಿನ್ ಮಾಹಿತಿಯಂತೆ, ಜಿಲ್ಲೆಯ 18 ಮಂದಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮೂರು ಮಂದಿ ಪುರುಷರು, ಓರ್ವ ಮಹಿಳೆ. ನೆಲಮಂಗಲದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು. ಹೊಸಕೋಟೆ ನಾಲ್ಕು ಮಂದಿ ಪುರುಷರು ಹಾಗೂ ದೇವನಹಳ್ಳಿಯಲ್ಲಿ ಐದು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರಿಗರ ಸೋಂಕು ದೃಢಪಟ್ಟಿದೆ.
ಪ್ರಸ್ತುತ ಜಿಲ್ಲೆಯಲ್ಲಿ 56ಮಂದಿಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 112ಕ್ಕೆ ಏರಿಕೆಯಾಗಿದ್ದರೆ, 3 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, 591 ಮಂದಿಯ ಫಲಿತಾಂಶ ಬರಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

