
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿ, ಚುನಾಯಿತ ಪ್ರತಿನಿಧಿಗಳು(ಹಾಲಿ ಸದಸ್ಯರು ಮತ್ತು ಮಾಜಿ ಸದಸ್ಯರು), 60 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷ ಮೇಲ್ಪಟ್ಟು ದೀರ್ಘಕಾಲದ ಖಾಯಿಲೆಯಿಂದ ಬಳಲುತ್ತಿರುವವರಿಗೆ ಕೋವಿಡ್-19 ಲಸಿಕೆ ನೀಡುವ ವಿಶೇಷ ಅಭಿಯಾನವನ್ನು 2021ರ ಮಾ.17ರಂದು ಬೆಳಗ್ಗೆ 10:00 ಗಂಟೆಯಿಂದ 11:30 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಎಲ್ಲಾ ಅರ್ಹ ಸದಸ್ಯರುಗಳು ಸದರಿ ವಿಶೇಷ ಅಭಿಯಾನದಲ್ಲಿ ಭಾಗವಹಿಸಿ, ಕೋವಿಡ್-19 ಲಸಿಕೆಯನ್ನು ಪಡೆದು ಇತರರಿಗೆ ಮಾದರಿಯಾಗಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

