
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ಪಟ್ಟಣದ ಬೀದಿಗಳಲ್ಲಿರುವ ವಿವಿಧ ಅಂಗಡಿ, ಮುಂಗಟ್ಟುಗಳ ಮೇಲೆ ಕಾರ್ಯಾಚರಣೆ ನಡೆಸಿ, ದಂಡ ವಿಧಿಸಲಾಯಿತು.

ಒಟ್ಟು 25 ಪ್ರಕರಣಗಳನ್ನು ದಾಖಲಿಸಲಾಗಿದ್ದು, 5000 ರೂ.ಗಳ ದಂಡ ಸಂಗ್ರಹಿಸಲಾಯಿತು.
ಈ ವೇಳೆ ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ಶಾಂತಲಾ ಅವರು ಮಾತನಾಡಿ ಮೇ 31ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಅತ್ಯುತ್ತಮ ಕೋಟ್ಪಾ ಅನುಷ್ಠಾನ ಜಿಲ್ಲೆಯಾಗಬೇಕಿರುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದು ತಿಳಿಸಿದರು.
ಕಾರ್ಯಾಚರಣೆ ವೇಳೆ ನೆಲಮಂಗಲ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಹರೀಶ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರ್ತಿ ಡಾ.ವಿದ್ಯಾರಾಣಿ, ಹಿರಿಯ ಆರೋಗ್ಯ ಸಹಾಯಕ ಪುಟ್ಟೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

