
ದೊಡ್ಡಬಳ್ಳಾಪುರ: ತಾಲೂಕಿನ ಶಿರವಾರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು.

ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಅಧಿಕಾರಿ ಪ್ರಮೋದ್ ಕುಮಾರ್ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಸುಬ್ರಮಣಿ, ಉಪಾಧ್ಯಕ್ಷರಾಗಿ ಮುನೇಗೌಡ ಅವಿರೋಧಕವಾಗಿ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಮುಖಂಡರಾದ ಮುನಿಶಾಮಯ್ಯ, ನಾಗರಾಜು, ಸುರೇಶ್, ಚಿಕ್ಕನರಸಪ್ಪ, ಹನುಮಂತರಾಯಪ್ಪ, ವೀರಸ್ವಾಮಿ ಅಭಿನಂದನೆ ಸಲ್ಲಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

