
ದೊಡ್ಡಬಳ್ಳಾಪುರ: ತಾಲ್ಲೂಕಿನ 22 ಗ್ರಾಮಪಂಚಾಯಿತಿ ವ್ಯಾಪ್ತಿಯ, ಗ್ರಾಮಗಳ ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಕಾರ್ಯ ಆರಂಭವಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಟಿ.ಮುರುಡಯ್ಯ ಹರಿತಲೇಖನಿಗೆ ತಿಳಿಸಿದ್ದಾರೆ.

ಈ ಕುರಿತಂತೆ ಮಾತಾನಾಡಿರುವ ಅವರು, ಸ್ವಚ್ಚ ಭಾರತ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಈಗಾಗಲೇ ಬಾಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ ಹಾಗೂ ದರ್ಗಾಜೋಗಹಳ್ಳಿ ಗ್ರಾಮಪಂಚಾಯಿತಿಗಳಲ್ಲಿ ಈ ಯೋಜನೆ ಯಶಸ್ವಿಯಾಗಿ ಆರಂಭದೊರಕಿತ್ತು. ಮುಂದುವರೆದ ಭಾಗವಾಗಿ ಉಳಿದ 26 ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಸಂಕೀರ್ಣ ಘಟಕ ನಿರ್ಮಿಸಿ ತ್ಯಾಜ್ಯವನ್ನು ಸಂಗ್ರಹಿಸಿ ಹಸಿ ಕಸ, ಒಣ ಕಸವನ್ನು ವಿಂಗಡಿಸಿ ವಿಲೇವಾರಿ ಮಾಡಲು ಉದ್ದೇಶಿಸಲಾಗಿದೆ.
ಪ್ರಸ್ತುತ 22 ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮನೆಗಳಿಂದ ತ್ಯಾಜ್ಯ ಸಂಗ್ರಹಿಸುವ ಕಾರ್ಯ ಆರಂಭವಾಗಿದೆ. ಉಳಿದ ಗ್ರಾಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ಘಟಕ ನಿರ್ಮಾಣ ಕಾರ್ಯಕ್ಕೆ ಅಡ್ಡಿ, ತ್ಯಾಜ್ಯ ಸಂಗ್ರಹ ವಾಹನಗಳ ಬಾರದಿರುವುದರಿಂದ ತ್ಯಾಜ್ಯ ಸಂಗ್ರಹಣೆ ಕಾರ್ಯ ವಿಳಂಬವಾಗಿದ್ದು, ತ್ವರಿತವಾಗಿ ಕಾರ್ಯ ಆರಂಭಿಸುವಂತೆ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.
ತ್ಯಾಜ್ಯ ಸಂಗ್ರಹಣೆಗಾಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶೇ.100ರಷ್ಟು ಮನೆಗಳಿಗೆ ತ್ಯಾಜ್ಯ ಸಂಗ್ರಹ ಬಕೆಟ್ ಗಳನ್ನು ವಿತರಿಸಲಾಗಿದೆ ಎಂದಿರುವ ಅವರು ಯೋಜನೆಯ ಯಶಸ್ಸಿಗೆ ತಾಲೂಕು ಪಂಚಾಯಿತಿ ಹಾಗೂ ಗ್ರಾಮಪಂಚಾಯಿತಿವತಿಯಿಂದ ಶ್ರಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

