
ಬೆಂ.ಗ್ರಾ.ಜಿಲ್ಲೆ: ಪ್ರಧಾನಿಯಿಂದ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಾವರೆಕೆರೆ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿ ಆಯ್ಕೆಯಾದ ಹಿನ್ನೆಲೆ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಸುರೇಶ್ ಕುಮಾರ್ ತಾವರೆಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾದ ವಿದ್ಯಾರ್ಥಿ ಮನೋಜ್ಅನ್ನು ಅಭಿನಂದಿಸಿದರು.

ಆನ್ಲೈನ್ ಮೂಲಕ ಪ್ರಧಾನಿಯವರೊಂದಿಗೆ ಪರೀಕ್ಷಾ ಪೆ ಚರ್ಚೆಗೆ ರಾಜ್ಯದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಉಡುಪಿ ಮತ್ತು ಹೊಸಕೋಟೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಇನ್ನೂ ಕೇವಲ 3 ತಿಂಗಳು ಮಾತ್ರ ಉಳಿದಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈಗಾಗಲೇ ಸಿಲಬಸ್ ಕಡಿಮೆ ಮಾಡಲಾಗಿದೆ. ವಿದ್ಯಾರ್ಥಿಗಳು ಮೊದಲು ತಮ್ಮಲ್ಲಿರುವ ಭಯ ಬಿಟ್ಟು ಲವಲವಿಕೆಯಿಂದ ಪರೀಕ್ಷೆ ಎದುರಿಸಬೇಕು ಎಂದು ತಿಳಿಸಿದರು.
ಸಚಿವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಚರ್ಚೆ ನಡೆಸಿ, ಸರ್ಕಾರಿ ಶಾಲೆ ಮಕ್ಕಳು ಕರೊನಾ ಸಮಯದಲ್ಲಿ ನಡೆದುಕೊಳ್ಳುತ್ತಿರುವ ರೀತಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.
ಕರೊನಾ ವೈರಾಣು ಎಂಬುದು ಮುಂದಿನ ದಿನಗಳಲ್ಲಿ ಸಹ ಇರಲಿದ್ದು, ಅದರ ಜೊತೆ ನಾವು ಜೀವಿಸುವುದು ಅನಿವಾರ್ಯವಾಗಿದ್ದು, ಸರ್ಕಾರ ಸಂಪೂರ್ಣವಾಗಿ ಸ್ಪಂದಿಸುತ್ತಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ರಾಜ್ಯದಲ್ಲಿ ಕರೊನಾ ಹೆಚ್ಚಾಗಿರುವುದು ಆತಂಕದ ಸಂಗತಿಯೇ ಆದರೂ ಮಹಾರಾಷ್ಟ್ರ, ಕೇರಳ ರಾಜ್ಯಗಳನ್ನು ಹೋಲಿಸಿದರೆ ಕರ್ನಾಟಕದಲ್ಲಿ ಕೊರೋನಾ ಸೋಂಕು ಇತ್ತೀಚಿನ ದಿನಗಳಲ್ಲಿ ವೇಗ ಪಡೆಯುತ್ತಿದ್ದು, ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು ಎಂದರು.
ಕೋವಿಡ್ ನಿಯಮ ಪಾಲನೆ ಮಾಡದೆ ಸಾರ್ವಜನಿಕರೇ ಕೊರೋನಾ ಸೋಂಕು ಹೆಚ್ಚಿಸುತ್ತಿದ್ದಾರೆಯೇ ಎಂದು ತಿಳಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

