
ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಶುಕ್ರವಾರದ ಕೋವಿಡ್-19 ವರದಿಯಲ್ಲಿ ಜಿಲ್ಲೆಯ 20 ಜನರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ತಾಲೂಕಿನಲ್ಲಿ 5 ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ 7 ಜನರಿಗೆ ಸೋಂಕು ದೃಢಪಟ್ಟಿದ್ದರೆ, 3 ಮಂದಿ ಪುರುಷರು ಮತ್ತು 2 ಮಹಿಳೆಯರಿಗೆ ಸೇರಿ 5 ಮಂದಿಗೆ ಸೋಂಕು ದೃಢ ಪಟ್ಟು ದೊಡ್ಡಬೆಳವಂಗಲ ತಾಲೂಕು ಎರಡನೇ ಸ್ಥಾನದಲ್ಲಿದೆ.
ಉಳಿದಂತೆ ದೇವನಹಳ್ಳಿ ಹಾಗೂ ಹೊಸಕೋಟೆ ತಾಲೂಕಿನ ತಲಾ ನಾಲ್ಕು ಮಂದಿ ಪುರುಷರಿಗೆ ಸೋಂಕು ದೃಢಪಟ್ಟಿದೆ.
ಪ್ರಸ್ತುತ ಜಿಲ್ಲೆಯಲ್ಲಿ 48 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 194ಕ್ಕೆ ಏರಿಕೆಯಾಗಿದ್ದರೆ, 11ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, 541 ಮಂದಿಯ ಫಲಿತಾಂಶ ಬರಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

