
ದೊಡ್ಡಬಳ್ಳಾಪುರ: ಮಾ.29ರಂದು ನಡೆಯಲಿರುವ ತಾಲ್ಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ 18 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ, ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಶುಕ್ರವಾರ ಸಲ್ಲಿಕೆಯಾಗಿದ್ದ ಎಲ್ಲಾ 94 ನಾಮಪತ್ರಗಳು ಕ್ರಮಬದ್ಧವಾಗಿವೆ.

ಇಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಎಲ್ಲಾ 94 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್ ಹರಿತಲೇಖನಿಗೆ ತಿಳಿಸಿದ್ದಾರೆ.
ಚುನಾವಣೆಗೆ ಪರಿಶಿಷ್ಟ ಜಾತಿ- 24, ಪರಿಶಿಷ್ಟ ಪಂಗಡ-3, ಹಿಂದುಳಿದ ವರ್ಗ ‘ಎ’ 6, ಹಿಂದುಳಿದ ವರ್ಗ ‘ಬಿ’ 3, ಸಾಮಾನ್ಯ 58 ಜನ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು ಸಾಮಾನ್ಯ ಅಭ್ಯರ್ಥಿಗಳು 60 ಹಾಗೂ ಮಹಿಳಾ ಮೀಸಲಾತಿ ಸ್ಥಾನಕ್ಕೆ 34 ಜನ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ ಐದು ನಾಮಪತ್ರಗಳು ಪುನರಾವರ್ತಿತ ನಾಮಪತ್ರಗಳಾಗಿದ್ದು, ಅವು ಸಹ ಕ್ರಮಬದ್ಧವಾಗಿವೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

