ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಿಂದ ರಾಜ್ಯದಲ್ಲಿ ಆಡಳಿತದಲ್ಲಿ ಕ್ರಾಂತಿಯಾಗಿದೆ: ಗೃಹ ಸಚಿವ ಬಸವಾರಾಜ್ ಬೊಮ್ಮಾಯಿ‌

ಹುಬ್ಬಳ್ಳಿ: ಕಂದಾಯ ಸಚಿವ ಆರ್.ಅಶೋಕ ರೂಪಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಿಂದ ಆಡಳಿತದಲ್ಲಿ ಕ್ರಾಂತಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಛಬ್ಬಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಚಿವರ ಪರಿಶ್ರಮದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ. ಸಚಿವ ಸ್ನೇಹಿತ ಅಶೋಕ ರಾತ್ರಿ ಗ್ರಾಮಕ್ಕೆ ಬಂದು ವಾಸ್ತವ್ಯ ಮಾಡದೇ, ಹಗಲ ಹೊತ್ತಿನಲ್ಲಿ ಬಂದು ಜನರ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸಿ ವಾಸ್ತವ್ಯ ಮಾಡುತ್ತಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ ಮಾಡಲು ಬುದ್ದಿ ಬಳಸಬಾರದು.‌ ಹೃದಯದಿಂದ ಕಾರ್ಯನಿರ್ವಹಿಸಬೇಕು.‌ ಇದಕ್ಕೆ ಅಪವಾದ ಎನಿಸುವಂತೆ ಸಚಿವ ಅಶೋಕ್ ಕಾರ್ಯವಿದೆ. ಸರ್ಕಾರ ಜನರ ಮನೆಗಳ ಬಾಗಿಗೆ ಬಂದಿದೆ. ಇದರಿಂದ ಹಳ್ಳಿಗಳ ಸಮಸ್ಯೆ ಚಿತ್ರಣ ಅಧಿಕಾರಿಗಳಿಗೆ ಲಭ್ಯವಾಗುತ್ತದೆ. ಇದು ಯೋಜನೆ ಅನುಷ್ಠಾನಕ್ಕೆ ಅನುಕೂಲವಾಗುತ್ತದೆ. ಈ ಕಾರ್ಯಕ್ರಮ ಅಧಿಕಾರದ ವಿಕೇಂದ್ರಿಕರಣ ನಿಜ ರೂಪವಾಗಿದೆ. ಇದರಿಂದ ಜನರಿಗೆ ಸರ್ಕಾರ ಮೇಲೆ ವಿಶ್ವಾಸ ಬರುತ್ತದೆ. ಇದಕ್ಕೆ ಮುಖ್ಯಮಂತ್ರಿಗಳ ಬೆಂಬಲವಿದೆ. ಛಬ್ಬಿ ಗ್ರಾಮದಲ್ಲಿ ಎಲ್ಲಾ ಸಮುದಾಯದವರು ಸಾಮರಸ್ಯದಿಂದ ಇದ್ದಾರೆ. ಛಬ್ಬಿ ಗಣಪತಿ ಪ್ರಸಿದ್ದಿಯಾಗಿದೆ. ಛಭ್ಬಿಗೆ ಉಪಠಾಣೆ ನೀಡಲಾಗುವುದು. 

ವಿಧಾನ ಸೌಧದಲ್ಲಿ ಹವಾನಿಯಂತ್ರಿತ ಕೊಠಡಿಯಲ್ಲಿ ಬಿಸಲರಿ ನೀರು ಕುಡಿದು ಹಳ್ಳಿಗಳ ಕುಡಿಯುವ ನೀರಿನ ಕುರಿತು ಚರ್ಚಿಸುತ್ತೇವೆ. ಆದರೆ ಹಳ್ಳಿಗಳಲ್ಲಿ ಸಮಸ್ಯೆ ಜೊತೆ ಜೀವಿಸುವವರ ಜೊತೆ ಇದ್ದು ಸಚಿವರು ಸಮಸ್ಯೆ ಬಗೆ ಹರಿಸುತ್ತಿದ್ದಾರೆ. ಆಳುವುದು ಬೇರೆ ಆಡಳಿತ ಮಾಡುವುದು ಬೇರೆ. ಕಲ್ಯಾಣ ಚಾಲುಕ್ಯ ಶಾಸನ ನುಡಿಯಂತೆ , ಸಚಿವ ಅಶೋಕ ಆಳುವವರನ್ನು ಆಡಳಿತ ಮಾಡವ ನಿಟ್ಟಿನಲ್ಲಿ ತೊಡಗಿಸಿದ್ದಾರೆ.ಇನ್ನು ಮುಂದೆ ಹಳ್ಳಿಗಳ ಸಮಸ್ಯೆ ಹಳ್ಳಿಗಳಲ್ಲೆ ಬಗೆ ಹರಿದು‌ ಜನರಿಗೆ ಒಳಿತಾಗಬೇಕು. ಆಡಳಿತದ ಸುತ್ತ ಜನರು ಇರಬಾರದು. ಜನರ ಮಧ್ಯ ಆಡಳಿತ ಬರಬೇಕು ಎಂದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!