ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣ್ ಅಭಿಯಾನ ಯೋಜನೆಯಡಿ, ಪೋಷಣ್ ಪಕ್ವಾಡ ಕುರಿತ ಜಾಗೃತಿ ಕಾರ್ಯಕ್ರಮ ತಾಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿಯ ಹುಸ್ಕೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಕನಸವಾಡಿ ವೃತ್ತದ ಅಂಗನವಾಡಿ ಮೇಲ್ವಿಚಾರಕಿ ತೇಜಸ್ವಿನಿ ಮಾತನಾಡಿ, ಮಕ್ಕಳ ಆರೋಗ್ಯ ಕಾಪಾಡುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ. ತಾಯಿ ಹಾಗೂ ಮಗುವಿಗೆ ಪೌಷ್ಟಿಕ ಆಹಾರ ನೀಡುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ. ಗರ್ಭಿಣಿಯರು, ಬಾಣಂತಿಯರು, 6 ವರ್ಷದೊಳಗಿನ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸುವುದು ಮತ್ತು ಅಂಗನವಾಡಿಗಳಿಗೆ ಮಕ್ಕಳನ್ನು ಸೇರಿಸುವ ಮೂಲ ಉದ್ದೇಶ ಪೋಷಣ್ ಪಕ್ವಾಡ್ ಯೋಜನೆ ಹೊಂದಿದೆ ಎಂದರು.
ಕಾರ್ಯಕ್ರಮದಲ್ಲಿ ಸಾಧಾರಣ ಕಡಿಮೆ ತೂಕದ ಮಕ್ಕಳನ್ನು ಗುರುತಿಸಿ, ಉತ್ತಮ ಪೌಷ್ಟಿಕ ಆಹಾರ ನೀಡುವುದರ ಬಗ್ಗೆ ತಾಯಂದಿರಿಗೆ ತಿಳಿಸಲಾಯಿತು.
ಗ್ರಾಮಸ್ಥರಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ, ಕೈತೋಟ ನಿರ್ಮಾಣದ ಬಗ್ಗೆ, ಪರಿಸರದ ಸ್ವಚ್ಛತೆ, ಕೋವಿಡ್ ಬಗ್ಗೆ ಜಾಗೃತಿ, ಅಂಗನವಾಡಿ ಕೇಂದ್ರದಲ್ಲಿ ನೀಡುವ ಸೌಲಭ್ಯಗಳ ಬಗ್ಗೆ ತಿಳಿಸಲಾಯಿತು.
ಅಂಗವನವಾಡಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..