
ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಭಾನುವಾರದ ಕೋವಿಡ್-19 ವರದಿಯಲ್ಲಿ ಜಿಲ್ಲೆಯ 32 ಜನರಿಗೆ ಸೋಂಕು ದೃಢಪಟ್ಟು, ಇಬ್ಬರು ತೀವ್ರ ನಿಗಾ ಘಟಕಕ್ಕೆ ದಾಖಲಾಗಿರುವುದರಿಂದ ಜಿಲ್ಲೆಯಲ್ಲಿ ಕರೊನಾಂತಕವನ್ನುಂಟು ಮಾಡಿದೆ.

ಜಿಲ್ಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಎಂಟು ಪುರುಷರು ಹಾಗೂ ಆರು ಮಹಿಳೆಯರು ಸೇರಿದಂತೆ 14. ಆರು ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರಿಗೆ ಸೇರಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 8. ದೇವನಹಳ್ಳಿ ತಾಲೂಕಿನಲ್ಲಿ ತಲಾ ಐದು ಮಂದಿ ಪುರುಷರು ಮೂರು ಮಂದಿ ಮಹಿಳೆಯರು ಸೇರಿ 8 ಮತ್ತು ಹೊಸಕೋಟೆ ತಾಲೂಕಿನ ಇಬ್ಬರು ಪುರುಷರಲ್ಲಿ ಸೋಂಕು ದೃಢಪಟ್ಟಿದೆ.
ಪ್ರಸ್ತುತ ಜಿಲ್ಲೆಯಲ್ಲಿ 55 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 222ಕ್ಕೆ ಏರಿಕೆಯಾಗಿದ್ದರೆ, 14ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, 541 ಮಂದಿಯ ಫಲಿತಾಂಶ ಬರಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

