
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ದ ಕ್ಷೇತ್ರ ಮಧುರೆ ಹೋಬಳಿ ಕನಸವಾಡಿಯಲ್ಲಿ ಶ್ರೀ ಶನಿಮಹಾತ್ಮ ಸ್ವಾಮಿಯ 66ನೇ ವರ್ಷದ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ದೊಡ್ಡಬಳ್ಳಾಪುರ, ಬೆಂಗಳೂರು, ನೆಲಮಂಗಲ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಹಣ್ಣು, ದವನ ಸಮರ್ಪಿಸಿ ಧನ್ಯತೆ ಮೆರೆದರು.
ಬ್ರಹ್ಮ ರಥೋತ್ಸವದ ಅಂಗವಾಗಿ, ಶ್ರೀ ಶನಿಮಹಾತ್ಮ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದಲ್ಲಿ ಯಾಗ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ವಿವಿಧ ಗ್ರಾಮಗಳಿಂದ ಪಾನಕ, ಕೋಸಂಬರಿಗಳನ್ನು ಮಾಡಿಕೊಂಡು ಬಂದಿದ್ದ ರೈತರು ಎತ್ತಿನ ಗಾಡಿಗಳಲ್ಲಿ ತಂದು ಭಕ್ತಾದಿಗಳಿಗೆ ಹಂಚಿಕೆ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ರಥೋತ್ಸವಕ್ಕೂ ಮುನ್ನ ಶನಿಮಹಾತ್ಮಸ್ವಾಮಿ ಮೆರವಣಿಗೆ ದೇವರನ್ನು ಪಾನಕ ಹಂಚಿಕೆ ಸ್ಥಳಕ್ಕೆ ಹೊತ್ತುಕೊಂಡು ಹೋಗಿ ಪೂಜೆ ಸಲ್ಲಿಸಲಾಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ಮಾ.22ರಿಂದ 29ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೌರಾಣಿಕ ನಾಟಕಗಳನ್ನು ಆಯೋಜಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

