
ದೊಡ್ಡಬಳ್ಳಾಪುರ: ತಾಲೂಕಿನ ಸೋತೆನಹಳ್ಳಿ ಬಳಿಯ ಕಳ್ಳರಗುಟ್ಟೆ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ತೂಬಗೆರೆ ಗ್ರಾಮಸ್ಥನೊರ್ವ ಅರಣ್ಯಕ್ಕೆ ಬೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು ಗ್ರಾಮಸ್ಥ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಕೂಡಲೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ದೊಡ್ಡಬಳ್ಳಾಪುರ ಗ್ರಾಮಂತರ ಠಾಣೆ ಪೊಲೀಸರು ಸುಮಾರು 45 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ಮಹಿಳೆ ಸಾವನ್ನಪ್ಪಿರುವ ಶಂಕೆಯಾಗಿದ್ದು, ಮಹಿಳೆಯ ಶವ ಪೂರ್ತಿ ಕೊಳೆತ ಸ್ಥಿತಿಯಲ್ಲಿದ್ದು ಕಾಡು ಪ್ರಾಣಿಗಳು ಮುಖವನ್ನೆಲ್ಲ ಕಚ್ಚಿ ತಿಂದಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟಮಾತನಾಡಿ, ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

