
ದೊಡ್ಡಬಳ್ಳಾಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರೈತರು ಉತ್ತಮ ಗುಣಮಟ್ಟದ ಹಾಲನ್ನು ಪೂರೈಸಿ ಸಂಘದ ಹೇಳಿಗೆ ಕೈಜೋಡಿಸಿ, ಸಂಘದಿಂದ ದೊರಕುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಶಾಸಕ ಟಿ.ವೆಂಕಟರಮಣಯ್ಯ ಕರೆ ನೀಡಿದರು.

ತಾಲೂಕಿನ ಮಲ್ಲೋಹಳ್ಳಿ ಕಾಲೋನಿಯಲ್ಲಿ ಸುಮಾರು 14 ಲಕ್ಷದ ಸಂಘದ ವೆಚ್ಚದಲ್ಲಿ, ನೂತನವಾಗಿ ನಿರ್ಮಿಸಲಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಿನ ಸರ್ಕಾರ ಅನುದಾನ ಬಿಡುಗಡೆ ಮಾಡುವುದರಲ್ಲಿ ತಾರತಮ್ಯ ಮಾಡುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ಯನ್ನು ದಿನೇ ದಿನೇ ಹೆಚ್ಚಳ ಮಾಡುತ್ತಿರುವುದು ಸಾಮಾನ್ಯ ವರ್ಗದ ಜನರಿಗೆ ತೊಂದರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ಸಹಕಾರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ನಿರ್ದೇಶಕ ಕೇಶವಮೂರ್ತಿ, ಜಿಪಂ ಸದಸ್ಯ ಚುಂಚೇಗೌಡ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಚೆನ್ನಮ್ಮ ರಾಮಲಿಂಗಯ್ಯ, ಎಂಪಿಸಿಎಸ್ ಅಧ್ಯಕ್ಷ ಡಿ.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಇಂದಿರಮ್ಮ, ಸದಸ್ಯೆ ಸುಧಾ ಮಂಜುನಾಥ್, ಸಿ.ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷೆ ಮಂಗಳಮ್ಮಶಂಕ್ರಪ್ಪ, ಮಾಜಿ ಗ್ರಾಪಂ ಅಧ್ಯಕ್ಷೆ ಉಮಾಗಂಗಣ್ಣ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲೋಹಳ್ಳಿ ಪುನೀತ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

