
ಬೆಂ.ಗ್ರಾ.ಜಿಲ್ಲೆ: ರಾಜ್ಯದಾದ್ಯಂತ ಕೋವಿಡ್-19 ಎರಡನೇ ಅಲೆಯ ಆತಂಕ ಎದುರಾಗಿದೆ. ಅಂತೆಯೇ ಗ್ರಾಮಾಂತರ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆ ದಿನೆ ದಿನೆ ಹೆಚ್ಚುತ್ತಿದ್ದರೂ, ಸೋಂಕಿನ ಹತೋಟಿಗೆ ಜಿಲ್ಲಾ ಆರೋಗ್ಯ ಇಲಾಖೆ ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಗಳವಾರ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಕೋವಿಡ್-19 ವರದಿಯಲ್ಲಿ ಮತ್ತೆ ಒಂದೇ ದಿನ 32ಮಂದಿಗೆ ಸೋಂಕು ದೃಢಪಟ್ಟಿದೆ. ಆದರೆ ಕರೊನಾ ವೈರಾಣುವಿಗೆ ಜನತೆ ಆತಂಕಗೊಳ್ಳಬೇಕೋ, ಅಥವಾ ನಿಯಮ ಉಲ್ಲಂಘನೆ ಮಾಡುತ್ತಿರುವ ಜನರ ಕಂಡು ಕರೊನಾ ಅತಂಕಗೊಳ್ಳಬೇಕೋ ಉತ್ತರ ದೊರಕದಾಗಿದೆ.
ಇತ್ತೀಚಿನ ವರದಿಯಲ್ಲಿ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು ಮಂಗಳವಾರದ ವರದಿಯಲ್ಲಿ ಸಹ ಎಂಟು ಪುರುಷರು, ನಾಲ್ಕು ಮಹಿಳೆಯರು ಸೇರಿ 12 ಮಂದಿಗೆ ಸೋಂಕು ದೃಢಪಟ್ಟಿದೆ.
ಉಳಿದಂತೆ ಹೊಸಕೋಟೆ ತಾಲೂಕಿನ ಏಳು ಪುರುಷರು, ಇಬ್ಬರು ಮಹಿಳೆಯರು ಸೇರಿ 9 ಮಂದಿ. ದೇವನಹಳ್ಳಿ ತಾಲೂಕಿನ ಐವರು ಪುರುಷರು, ಇಬ್ಬರು ಮಹಿಳೆಯರು ಸೇರಿ 7 ಮಂದಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಮೂರು ಮಂದಿ ಪುರುಷರು, ಓರ್ವ ಮಹಿಳೆ ಸೇರಿ ನಾಲ್ವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ.
ಪ್ರಸ್ತುತ ಜಿಲ್ಲೆಯಲ್ಲಿ 55 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 253ಕ್ಕೆ ಏರಿಕೆಯಾಗಿದ್ದರೆ, 9 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, 501 ಮಂದಿಯ ಫಲಿತಾಂಶ ಬರಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

