ಬೆಂ.ಗ್ರಾ.ಜಿಲ್ಲೆ: ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಎಪ್ರಿಲ್ 06 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಎಪ್ರಿಲ್ 06 ರಂದು ಬೆಳಿಗ್ಗೆ 11:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಯೋಜನೆ(ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ದೇವನಹಳ್ಳಿ ರಸ್ತೆಯ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….