ದೊಡ್ಡಬಳ್ಳಾಪುರ: ಪ್ಲವನಾಮ ಸಂವತ್ಸರ ಪ್ರಾರಂಭವಾಗಿರುವ ಇಂದಿನ ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ: ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದು ಕನ್ನಡದಲ್ಲಿ ಶುಭಕೋರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ: ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ: ಹೊಸತನ, ನಿರೀಕ್ಷೆ, ಭರವಸೆಗಳನ್ನು ಹೊತ್ತು ಯುಗಾದಿ ಬಂದಿದೆ. ಕಳೆದ ವರ್ಷದ ತೊಡಕುಗಳು ಈ ಹೊಸ ವರ್ಷ ನೀಗಲಿ. ಬೇವು-ಬೆಲ್ಲದ ಅನುಭವಗಳು ಈ ವರ್ಷ ಸಮನಾಗಿರಲಿ ಎಂದು ನಾನು ಆಶಿಸುತ್ತೇನೆ. ಈ ಶುಭ ವರ್ಷ ಎಲ್ಲರಿಗೂ ಒಳಿತು ತರಲೆಂದು ಭಗವಂತನಲ್ಲಿ ನಾನು ಕೋರುತ್ತೇನೆ. ನಾಡಿನ ಸಮಸ್ತರಿಗೂ ಯುಗಾದಿ-ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ: ಓ ಯುಗಾದಿಯೇ, ಹೊಸ ಕಾಲದ ಆದಿಯೇ, ಲೋಕದ ಜನರ ಕಷ್ಟಗಳ ನೀಗುತ್ತಾ ಬಾ.ಆರೋಗ್ಯದ ಭಾಗ್ಯವನ್ನು ಕರುಣಿಸು ಬಾ.ಎಲ್ಲರ ಬಾಳಲ್ಲಿ ಹೊಸ ವರ್ಷದ ಉತ್ಸಾಹ ತುಂಬುತ್ತಾ ಬಾ. ನಾಡಿನ ಎಲ್ಲ ನನ್ನ ಪ್ರೀತಿಯ ಬಂಧುಗಳಿಗೆ ಯುಗಾದಿಯ ಹಾರ್ದಿಕ ಶುಭಾಶಯಗಳು.
ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ: ತಾಲೂಕಿನ ಜನತೆ ಯುಗಾದಿ ಸಂಕಷ್ಟಗಳ ದೂರಾಗಿಸಲಿ. ಕರೊನಾ ಸೋಂಕಿನ ಮುಕ್ತಿ ನೀಡಿ, ಉತ್ತಮ ಮಳೆಯಾಗಿ ನೀರಿನ ಭವಣೆ ನೀಗಲಿ. ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳು ತ್ವರಿತವಾಗಿ ನೀಗಲಿ ಎಂದು ಹಾರೈಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..