ದೊಡ್ಡಬಳ್ಳಾಪುರ: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ..ಕರೊನಾ ಮಾರಣ ಕಳೆದ ವರ್ಷ ಕಳೆಗುಂದಿದ್ದ ಯುಗಾದಿಯನ್ನು, ಈ ವರ್ಷದ ಯುಗಾದಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಾನುವಾರ ಸಂಜೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ವಿನಿಮಯ ಭರಾಟೆ ಜೋರಾಗಿದ್ದು, ಮೋಬೈಲ್ಗಳ ಇನ್ ಬಾಕ್ಸ್ ತುಂಬಿ ಓಗುತ್ತಿವೆ.
ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಯುಗಾದಿ ಹಬ್ಬವು ಹಿಂದುಗಳ ದೃಷ್ಟಿಯಲ್ಲಿ ವರ್ಷಾರಂಭದ ಪವಿತ್ರ ದಿನ.
ಯುಗಾದಿ ಹಬ್ಬ ಅಂದಾಕ್ಷಣ ಹೊಸ ವರ್ಷ ಪ್ರಾರಂಭದ ದಿನ. ಹೊಸ ವರ್ಷದ ಜೊತೆಗೆ ಹೊಸ ಭರವಸೆ ಮತ್ತು ಹೊಸ ಚೈತನ್ಯ ತುಂಬುವ ದಿನ. ಯುಗ, ಅಂದರೆ ವಯಸ್ಸು ಮತ್ತು ಆದಿ ಅಂದರೆ ಪ್ರಾರಂಭ ಎಂಬುದಾಗಿ ‘ಯುಗಾದಿ’ ಎಂಬ ಹೆಸರು ಬಂದಿದೆ.
2021ರ ಯುಗಾದಿ ಆಚರಣೆ: ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ.ಇದು ಚೈತ್ರ ನವರಾತ್ರಿಯ ಮೊದಲ ದಿನವೂ ಹೌದು. ಚಳಿಗಾಲದ ಅಂತ್ಯ ಮತ್ತು ಸುಗ್ಗಿಯ ಋತುವಿನ ಆರಂಭದಲ್ಲಿ ಯುಗಾದಿ ಹಬ್ಬ ಬರುವುದು. ಚಂದ್ರಮನ ಯುಗಾದಿ 2021 ದಿನಾಂಕ ಮತ್ತು ಮುಹೂರ್ತ ಸಮಯ: ಯುಗಾದಿ ಹಬ್ಬ 2021ರ ಏಪ್ರಿಲ್ 12ನೇ ತಾರೀಕು ಪ್ರತಿಪದ ತಿಥಿಯಂದು ಬೆಳಿಗ್ಗೆ 7:59ಕ್ಕೆ ಆರಂಭಗೊಳ್ಳುತ್ತದೆ. ಮರುದಿನ ಏಪ್ರಿಲ್ 13ನೇ ತಾರೀಕು ಬೆಳಿಗ್ಗೆ 10.16ರ ಸಮಯಕ್ಕೆ ಮುಕ್ತಾಯಗೊಳ್ಳುತ್ತದೆ.
ಹಬ್ಬಕ್ಕೆ ಸಿದ್ಧತೆಗಳು: ಭಾರತೀಯ ಸಂಸ್ಕೃತಿಯ ಪ್ರಕಾರ ಯುಗಾದಿ ಹಬ್ಬ ಹೊಸ ವರ್ಷದ ಆಗಮನ. ಮನೆಯನ್ನು ಸ್ವಚ್ಛಗೊಳಿಸಿ ಮನೆಯ ಮುಂದೆ ರಂಗೋಲಿಯನ್ನಿಟ್ಟು ಹಬ್ಬಕ್ಕೆ ಬೆಳಿಗ್ಗೆಯಿಂದಲೇ ಮೆರಗುಗೊಳಿಸಲಾಗುತ್ತದೆ. ಯುಗಾದಿಯಂದು ಹೊಸ ಬಟ್ಟೆ, ಹೊಸ ವಿಚಾರ ಭರವಸೆಯತ್ತ ಇಡೀ ವರ್ಷ ಸಾಗಲಿ ಎಂಬ ನಂಬಿಕೆಯ ಜೊತೆ ಮುನ್ನಡೆಯವ ಹೆಜ್ಜೆಯಾಗಿರುತ್ತದೆ.
ಯುಗಾದಿ ಹಬ್ಬದ ಆಚರಣೆ: ಬೆಳಗ್ಗೆ ಬೇಗ ಎದ್ದು ಮನೆಯಲ್ಲಿ ಸಡಗರ, ಸಂಭ್ರಮ. ಮನೆಯ ಅಂಗಳವನ್ನು ಸ್ವಚ್ಛಗೊಳಿಸಿ ರಂಗಿನ ರಂಗೋಲಿ ಬಿಡಿಸುತ್ತಾರೆ. ಬೆಳಿಗ್ಗೆ ಎಣ್ಣೆ ಹಚ್ಚಿ ಸ್ನಾನ ಮಾಡಿ ಶುದ್ಧಗೊಳ್ಳುತ್ತಾರೆ. ಮನೆಯ ಎದುರಿನ ಬಾಗಿಲು, ದೇವಾಲಯದ ಬಾಗಿಲಿಗೆ ಮಾವಿನ ಎಲೆಗಳ ಹಾರ (ತಳಿರು ತೋರಣ) ಮಾಡಿ ಹೂವಿನ ಅಲಂಕಾರ ಮಾಡಲಾಗುತ್ತದೆ. ಯುಗಾದಿ ದಿನದಂದು ಯುಗಾದಿ ಹಬ್ಬದಂದು ಇನ್ನೊಂದು ವಿಶೇಷ ಆಚರಣೆ ಎಂದರೆ ಬೇವು – ಬೆಲ್ಲ ಹಂಚುವುದು, ಇದು ಜೀವನದ ಏಳು ಬೀಳುಗಳನ್ನ ಸೂಚಿಸುತ್ತದೆ. ಇದರಲ್ಲಿನ ಬೆಲ್ಲ ಬಾಳಿನ ಸಂತೋಷದ ಕ್ಷಣಗಳ ಸಂಕೇತವಾದರೆ, ಹುಳಿ ಬದುಕಿನ ಸವಾಲುಗಳನ್ನ, ಮಾವು ಆಶ್ಚರ್ಯದ ಕ್ಷಣಗಳನ್ನ, ಬೇವು ಕಹಿ ಕ್ಷಣಗಳ ಸಂಕೇತವಾಗಿದೆ. ವಿಶೇಷವಾದ ಬೇವು -ಬೆಲ್ಲ ಮಿಶ್ರಣವನ್ನು ಮೊದಲು ಭಗವಂತನಿಗೆ ಅರ್ಪಿಸಿ, ನಂತರ ಕುಟುಂಬದ ಸದಸ್ಯರಿಗೆ ಮತ್ತು ಮನೆಗೆ ಬರುವ ಅತಿಥಿಗಳಿಗೂ ನೀಡಲಾಗುತ್ತದೆ.
ಯುಗಾದಿಯ ಮಾರನೆಯ ದಿನವೂ ಹಬ್ಬದ ವಾತಾವರಣವೇ ಇರುತ್ತದೆ. ಮುಂಜಾನೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ದೇವರನ್ನು ಪೂಜಿಸಿ ಗುರುಹಿರಿಯರಿಗೆ ನಮಸ್ಕರಿಸುವರು.ಅಂದು ‘ವರ್ಷ ತೊಡಕು’ ಎಂದು ಆಚರಿಸಲಾಗುತ್ತದೆ. ಅಂದರೆ ಸತ್ಕಾರ್ಯಗಳಿಗೋಸ್ಕರ ನಮ್ಮನ್ನು ತೊಡಗಿಸಿಕೊಳ್ಳುವ ದಿನ. ವರ್ಷವಿಡೀ ಸುಖ ನೀಡುವಂತೆ, ಕಷ್ಟ ನಿವಾರಿಸುವಂತೆ ದೇವರಲ್ಲಿ ಕೇಳಿಕೊಳ್ಳುವ ದಿವಸ.
ಈ ದಿನ ಯಾರಿಗೆ ಏನನ್ನು ಪಡೆಯುವರೋ ಅದು ಇಡೀ ವರ್ಷದವರೆಗೆ ಇರುತ್ತದೆ ಎಂಬ ನಂಬಿಕೆ ಇದೆ. ಅಷ್ಟೇ ಅಲ್ಲದೇ ಅಂದು ಬಿದಿಗೆಯ ದಿನ ಚಂದ್ರದರ್ಶನ ಮಾಡುವರು. ‘ಆದಿ’ ಎಂಬ ಎರಡು ಶಬ್ದಗಳಿಂದ ಕೂಡಿದೆ. ಸೃಷ್ಟಿ ನಾಟಕದಲ್ಲಿ ನಾಲ್ಕು ಯುಗಗಳು ಇವೆ. ಸತ್ಯಯುಗ, ತ್ರೇತಾಯುಗ, ದ್ವಾಪರಯುಗ, ಮತ್ತು ಕಲಿಯುಗ. `ಆದಿ’ ಎಂದರೆ ಪ್ರಾರಂಭ, ಪೂರ್ವಕಾಲ ಎಂದಾಗುತ್ತದೆ. ಅದು ಮಾಂಸ ಪ್ರಿಯರ ಹಬ್ಬವೆನ್ನಬಹುದು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..