ದೊಡ್ಡಬಳ್ಳಾಪುರ: ಯುಗಾದಿ ಹಬ್ಬದಂದು ಸಾರ್ವಜನಿಕ ಪ್ರದೇಶದಲ್ಲಿ ಜೂಜಾಡುತ್ತಿದ್ದ ಒಂಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕೆ.ವೆಂಕಟೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ದೇವರಾಜ ನಗರದಲ್ಲಿ ಜೂಜಾಡುತ್ತಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.
ದೇವರಾಜ ನಗರದಲ್ಲಿ ಜೂಜಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಬಂಧಿತ ಆರೋಪಿಗಳಿಂದ 8740 ರೂಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕಾಲ್ಪನಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….