ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ನಗರದ ವಿವಿಧೆಡೆಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಎನ್.ಶ್ರೀನಿವಾಸಯ್ಯ. ಪ್ರಾಧ್ಯಾಪಕರಾದ ಡಾ.ಸದಾಶಿವರಾಮಚಂದ್ರಗೌಡ, ಪ್ರೋ.ದಿನಕರ್, ಸಿ.ರಾಮಚಂದ್ರಯ್ಯ, ಡಾ.ಸತೀಶ್, ಸಂಧ್ಯಾರಾಣಿ, ಡಾ.ಪ್ರಕಾಶ್, ಸಂಚಾಲಕರಾದ ನರಸಿಂಹಮೂರ್ತಿ, ಎಸ್.ಪಾಪಣ್ಣ ಮತ್ತಿತರಿದ್ದರು.
ನಗರಸಭೆಯಲ್ಲಿ ಆಚರಣೆ:ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ನಗರಸಭೆಯ ಕಚೇರಿಯಲ್ಲಿ ಆಚರಿಸಲಾಯಿತು.ಎಇಇ ವೀರಣ್ಣ, ಆರೋಗ್ಯಾಧಿಕಾರಿ ರೂಪ, ಸಿಬ್ಬಂದಿ ಶ್ರೀನಿವಾಸ್ ಮತ್ತಿತರಿದ್ದರು.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ: ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿನ ಡಾ.ಅಂಬೇಡ್ಕರ್ ಪ್ರತಿಮೆಗೆ ಶಾಸಕ ಟಿ.ವೆಂಕಟರಮಣಯ್ಯ ಮಾಲಾರ್ಪಣೆ ಮಾಡಿದರು. ಈ ವೇಳೆ ಹಲವು ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..