ದೊಡ್ಡಬಳ್ಳಾಪುರ: ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಇಸ್ಲಾಮಿಕ್ ಕ್ಯಾಲೆಂಡರ್ ನ 9ನೇ ತಿಂಗಳು ರಂಜಾನ್ ನಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ನೀರನ್ನು ಕೂಡ ಸೇವಿಸದೆ ಉಪವಾಸ ವ್ರತ ಆಚರಿಸುತ್ತಾರೆ.
ಈ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿಯೂ ಸಹ ಪವಿತ್ರ ರಂಜಾನ್ ಉಪವಾಸ ಆರಂಭವಾಗಿದ್ದು, ಮೊದಲ ದಿನ ಉಪವಾಸ ಕೈಗೊಂಡು ಇಪ್ತಿಯಾರ್ ಕೂಟ ಆಯೋಜಿಸಲಾಗಿತ್ತು.
ಮುಂದಿನ 29 ದಿನಗಳ ಕಾಲ ಇದೇ ರೀತಿ ಉಪವಾಸವಿದ್ದು, 30ನೇ ದಿನ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..