ಬೆಂ.ಗ್ರಾ.ಜಿಲ್ಲೆ: ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನೀಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಏಪ್ರಿಲ್ 26ರೊಳಗಾಗಿ ನೋಂದಣಿ ಮಾಡದಿದ್ದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿತ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿದ್ದು, ಖಾಸಗಿ ಆಸ್ಪತ್ರೆಗಳು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸರ್ಕಾರದೊಂದಿಗೆ ಸಹಕರಿಸಬೇಕು. ದೇಶ, ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನಿಂದ ಸಾಕಷ್ಟು ಪ್ರಮಾಣದಲ್ಲಿ ಜನರು ಸಂಕಷ್ಟ ಹೆದರಿಸುತ್ತಿದ್ದು, ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 26 ಖಾಸಗಿ ಆಸ್ಪತ್ರೆಗಳ ಪೈಕಿ ಕೇವಲ 6 ಖಾಸಗಿ ಆಸ್ಪತ್ರೆಗಳು ಮಾತ್ರ ಇಲ್ಲಿಯವರೆಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ನೋಂದಣಿ ಮಾಡಿದ್ದು, ಉಳಿದ ಖಾಸಗಿ ಆಸ್ಪತ್ರೆಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತು, ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಮತ್ತು ಜನರ ಆರೋಗ್ಯದ ಹಿತದೃಷ್ಟಿಯಿಂದ ನೋಂದಣಿಗೆ ಮುಂದಾಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….