ಬೆಂ.ಗ್ರಾ.ಜಿಲ್ಲೆ: ಕೋವಿಡ್ -19 ಸೋಂಕಿತರಿಗೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ‘ಯೋಜನೆಯಡಿಯಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಅನ್ನು ಉಚಿತವಾಗಿ ಒದಗಿಸಲಾಗುತ್ತದೆ.
ಕೋವಿಡ್ ರೋಗಿಗಳು ತಮ್ಮ ಇಚ್ಛಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಜನರಲ್ ವಾರ್ಡ್ ಗೆ ರೂ. 10,000, ಹೆಚ್ ಡಿಯುಗೆ ರೂ.12,000, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದ ಚಿಕಿತ್ಸೆಗೆ ರೂ. 15,000 ಹಾಗೂ ಐಸೊಲೇಷನ್ ಐಸಿಯು ವೆಂಟಿಲೇಟರ್ ಸಹಿತ ಚಿಕಿತ್ಸೆಗೆ ರೂ. 25,000 ಸರ್ಕಾರ ನಿಗದಿಪಡಿಸಿರುವ ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳ ಭರಿಸಬೇಕಾಗುತ್ತದೆ.
ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ, ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಲ್ಲಿ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ ದೂರವಾಣಿ ಸಂಖ್ಯೆ: 1800 425 8330 ಹಾಗೂ 1912 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು ಅಥವಾ ಇ-ಮೇಲ್ ವಿಳಾಸ [email protected]ಗೆ ದೂರು ಸಲ್ಲಿಸಬಹುದು ಹಾಗೂ 08022536200 ಗೆ ಕರೆ ಮಾಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….