ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ CSK ತಂಡ 69 ರನ್ಗಳ ಬೃಹತ್ ಗೆಲುವು ಪಡೆದಿದೆ.
CSK ನೀಡಿದ 192 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ್ದ RCB ಆಟಗಾರರು, ಯಾವ ಹಂತದಲ್ಲಿ ಪ್ರತಿರೋಧ ತೋರದೆ ಸೋಲಿಗೆ ಶರಣಾದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿತ್ತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 192 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಚೆನ್ನೈ ಪರ ಡುಪ್ಲೆಸಿಸ್ 50 (41), ಗಾಯಕ್‌ವಾಡ್ 33 (25) ಉತ್ತಮ ಆರಂಭ ನೀಡಿದ್ದರು. ನಂತರ ಬಂದ ರೈನಾ 24, ರಾಯುಡು 14, ಧೋನಿ 3 ಬಾಲ್ ಆಡಿ 2 ರನ್ ದಾಖಲಿಸಿ ಇನ್ನಿಂಗ್ಸ್ ಕಟ್ಟಿದ್ದರು. ಆರಂಭಿಕ ಎರಡು ವಿಕೆಟ್ ಕುಸಿತದ ಬಳಿಕ ಚೆನ್ನೈ ಅಲ್ಪಮೊತ್ತದ ಟಾರ್ಗೆಟ್ ನೀಡುವ ನಿರೀಕ್ಷೆ ಮೂಡಿಸಿತ್ತು. ಆದರೆ ಅಂತಿಮವಾಗಿ ಜಡೇಜಾ ಅಬ್ಬರಿಸಿದರು. ಜಡೇಜಾ 28 ಬಾಲ್‌ಗೆ 5 ಸಿಕ್ಸರ್, 4 ಬೌಂಡರಿ ಸಹಿತ 62 ರನ್ ಕಲೆಹಾಕಿದ್ದರು.
ಗೆಲ್ಲಲು 192 ರನ್‍ಗಳ ಕಠಿಣ ಗುರಿಯನ್ನು ಪಡೆದ ಆರ್‍ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 122 ರನ್‍ಗಳಿಸಿತು. ಈ ಮೂಲಕ ಸತತ 4 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಬೆಂಗಳೂರು ಈಗ ಎರಡನೇ ಸ್ಥಾನಕ್ಕೆ ಜಾರಿದೆ. ಚೆನ್ನೈ ಮೊದಲ ಸ್ಥಾನಕ್ಕೆ ಏರಿದರೆ. ಚೆನ್ನೈ ತಂಡದ ಪರ ರವೀಂದ್ರ ಜಡೇಜಾ ಅವರು ತೋರಿದ ಆಲ್ರೌಂಡ್ ಪ್ರದರ್ಶನದ ಎದುರು RCB ಆಟಗಾರರು ಮಂಕಾದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….