ಬೆಂ.ಗ್ರಾ.ಜಿಲ್ಲೆ: 2021ರ ಏಪ್ರಿಲ್ 26 ರಿಂದ ರಾಜ್ಯಾದ್ಯಂತ ಜನತಾ ಕರ್ಫ್ಯೂ ಜಾರಿಗೊಳಿಸಿದ ಹಿನ್ನೆಲೆ, ಬೆಂಗಳೂರು ನಗರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ವಲಸೆ ಬಂದು ಗ್ರಾಮಗಳಲ್ಲಿ ವಾಸ್ತವ್ಯ ಹೂಡಿರುವ ವಿವಿಧ ವರ್ಗದ ಜನರು, ಕಾರ್ಮಿಕರನ್ನು ಗ್ರಾಮ ಪಂಚಾಯಿತಿಯ ಗ್ರಾಮದ ಟಾಸ್ಕ್ ಪೋರ್ಸ್ ಸಮಿತಿ ವತಿಯಿಂದ ಕಡ್ಡಾಯವಾಗಿ ಗುರುತಿಸಿ, ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಉದ್ಯೋಗ ಚೀಟಿಯನ್ನು ತ್ವರಿತವಾಗಿ ವಿತರಿಸಿ, ತ್ವರಿತವಾಗಿ ಸದರಿ ಕಾರ್ಮಿಕರಿಗೆ ಸೂಕ್ತ ಉದ್ಯೋಗವನ್ನು ಒದಗಿಸಲಾಗುವುದೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ತಿಳಿಸಿದ್ದಾರೆ.
ಗ್ರಾಮದ ಟಾಸ್ಕ್‌ಫೋರ್ಸ್ ಸಮಿತಿ ವತಿಯಿಂದ ಗ್ರಾಮೀಣ ಪ್ರದೇಶಕ್ಕೆ ವಲಸೆ ಬಂದಿರುವ ವಿವಿಧ ವರ್ಗದ ನಾಗರೀಕರು / ಕಾರ್ಮಿಕರನ್ನು ಗುರುತಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಹಾಯಕರು, ಅಂಗನವಾಡಿ ಕಾರ್ಯಕರ್ತರ ಸಹಕಾರದೊಂದಿಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು (ಕೋವಿಡ್ ಪರೀಕ್ಷೆ) ಮಾಡಿಸಿ, ಸೋಂಕು ದೃಢಪಟ್ಟವರನ್ನು ಹೋಮ್ ಐಸೋಲೇಷನ್ ಮಾಡಲು ಎಲ್ಲಾ ಅಗತ್ಯ ಕ್ರಮವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….