ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ಸರ್ಕಾರ ಆದೇಶಿಸಿದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಕರೊನಾ ಕರ್ಪ್ಯೂ ಕಾರಣ ಪ್ರತಿನಿತ್ಯ ಸುಮಾರು 3ಲಕ್ಷ ಲೀಟರ್ ಗಳಿಗೂ ಹೆಚ್ಚು ಹಾಲು ಮಾರಾಟವಾಗದೆ ಉಳಿಯುತ್ತಿತ್ತು, ಈ ಕುರಿತು ಕೆಎಂಎಫ್ ಹಾಗೂ ಬಮೂಲ್ ವತಿಯಿಂದ ನಂದಿನಿ ಹಾಲಿನ ಮಳಿಗೆಗಳನ್ನು ತೆರೆಯಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮೂಲಕ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ ಎಂದರು.
ರಾಜ್ಯದಲ್ಲಿ ಕರೊನಾ ಕರ್ಪ್ಯೂ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸೇವೆಗಳಿಗೆ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಂದಿನಿ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿರುವುದರಿಂದ ಸಂಜೆ 8 ಗಂಟೆವರೆಗೂ ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ. ಗ್ರಾಹಕರು ಕೋವಿಡ್-19 ನಿಯಮ ಪಾಲಿಸಿ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….