ಬೆಂಗಳೂರಿನಲ್ಲಿ: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಆಕ್ಸಿಜನ್ ಬೆಡ್ ಅಳವಡಿಸಲು ಪೂರಕ ವಸ್ತುಗಳ ಕೊರೆತೆಯಾಗಿದ್ದು, ತ್ವರಿತವಾಗಿ ಪೂರೈಸುವಂತೆ ಶಾಸಕ ಟಿ.ವೆಂಕಟರಮಣಯ್ಯ ಕೇಂದ್ರ ಹಾಗೂ ರಾಜ್ಯ ಆರೋಗ್ಯ ಸಚಿವರನ್ನು ಒತ್ತಾಯಿಸಿದ್ದಾರೆ.
ತಾಲೂಕಿನಲ್ಲಿ ಕರೊನಾ ಸೋಂಕಿತರಿಗೆ ಚಿಕಿತ್ಸೆಗೆ ಅನುಕೂಲ ಕಲ್ಪಿಸಲು ಆಕ್ಸಿಜನ್ ತಯಾರಕರೊಂದಿಗೆ ಮಾತುಕತೆ ನಡೆಸಿ, ಅಗತ್ಯ ಆಕ್ಸಿಜನ್ ಗಳೊಂದಿಗೆ ಇಸ್ತೂರು, ದೊಡ್ಡಬಳ್ಳಾಪುರ ಮತ್ತಿತರ ಕಡೆ ಆಕ್ಸಿಜನ್ ಬೆಡ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಆದರೆ ಅಳವಡಿಕೆಗೆ ಅಗತ್ಯವಸ್ತುಗಳಾದ ಆಕ್ಸಿಜನ್ ಪೂರೈಸುವ ಪೈಪುಗಳು ಕೊರತೆ ಎದುರಾಗಿದ್ದು. ಈ ಪೈಪುಗಳು ದೆಹಲಿ ಹಾಗೂ ಗುಜರಾತ್ ರಾಜ್ಯಗಳಿಂದ ತರಿಸಬೇಕಿರುವುದರಿಂದ ಅಳವಡಿಕೆ ಕಾರ್ಯಕ್ಕೆ ಹಿನ್ನಡೆಯಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೂ ಮಾಹಿತಿ ನೀಡಿದ್ದು, ತ್ವರಿತವಾಗಿ ಪೂರೈಕೆ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಆರೋಗ್ಯ ಸಚಿವರನ್ನು ಅವರು ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….