ಬೆಂಗಳೂರು: ರಾಜ್ಯದಲ್ಲಿ ಮಾಧ್ಯಮದವರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.
ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ಎರಡನೇ ಅಲೆ ತೀವ್ರವಾಗಿರುವುದರಿಂದ ಹಗಲಿರುಳು ಶ್ರಮಿಸುತ್ತಿರುವ ಮಾಧ್ಯಮದವರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದೆಂದರು.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿ ಕೊವಿಡ್ ಸಂಬಂಧಿತ ಸಮಸ್ಯೆಗಳನ್ನು ಸರಿಪಡಿಸಲು ಸೂಚಿಸಿಲಾಗಿದೆ.
ಮೆಡಿಕಲ್ ಆಕ್ಸಿಜನ್ ಸರಬರಾಜು ವ್ಯವಸ್ಥೆಯ ಜವಾಬ್ಧಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ, ರೆಮ್ಡೆಸಿವರ್ ಪೂರೈಕೆ ನಿರ್ವಹಣೆ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ ಸಿ.ಎನ್.ಆಶ್ವತ್ಥನಾರಾಯಣ, ಆಸ್ಪತ್ರೆಗಳಲ್ಲಿನ ಬೆಡ್ಗಳ ಹೊಣೆಗಾರಿಕೆಯನ್ನು ಸಚಿವ ಆರ್. ಅಶೋಕ್ ನೋಡಿಕೊಳ್ಳಲಿದ್ದಾರೆ.
ಅರಣ್ಯ ಸಚಿವ ಅರವಿಂದ್ ಲಿಂಬಾವಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೆಲ ಜವಾಬ್ದಾರಿ ಹೊರಿಸಲಾಗಿದೆ ಎಂದವರು ತಿಳಿಸಿದರು.
ಚಾಮರಾಜನಗರದ ಘಟನೆ ಕುರಿತು 3 ದಿನದಲ್ಲಿ ವರದಿ ನೀಡಲು ಸೂಚಿಸಿದ್ದೇನೆ. ಮಹಾರಾಷ್ಟ್ರದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಹಾಗಾಗಿ ಜಿಂದಾಲ್ ಕಂಪನಿ ಉತ್ಪಾದಿಸುವ ಮೆಡಿಕಲ್ ಆಕ್ಸಿಜನ್ನ್ನು ನಾವೇ ಬಳಸಿಕೊಳ್ಳುವ ಕುರಿತು ಕೇಂದ್ರಕ್ಕೆ ಮನವಿ ಮಾಡುತ್ತೇವೆ.
ಸಂಸದ ತೇಜಸ್ವಿ ಸೂರ್ಯ ಹಾಸಿಗೆ ಬ್ಲಾಕಿಂಗ್ ಮಾಡುವ ದಂದೆ ಬಯಲಿಗೆಳೆದಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಈ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ವಿವರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….